Mysore
23
scattered clouds

Social Media

ಗುರುವಾರ, 22 ಜನವರಿ 2026
Light
Dark

ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ: ಶಾಸಕ ಜಿ.ಟಿ.ದೇವೇಗೌಡ

gt devegowda

ಮೈಸೂರು: ದಿನನಿತ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕುರಿತು ಚರ್ಚೆ ಮಾಡುವುದರಿಂದ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರ ನಾಯಕತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಶಾಸಕರು ಸಿದ್ದರಾಮಯ್ಯ ಸಿಎಂ ಆಗಿರುವ ತನಕ ಅವರನ್ನು ಬೆಂಬಲಿಸಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ ಅಂತಾ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂದಿದ್ದರು. ನನಗೆ ಆ ಜಾತಿಗೆಟ್ಟ ಬುದ್ದಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ. ನನ್ನ ಅಂತರಾತ್ಮವನ್ನು ಯಾರು ಅರಿತಿಲ್ಲ. ನನ್ನ ಕುಟುಂಬದವರೇ ನನ್ನನ್ನು ಅರ್ಥ ಮಾಡಿಕೊಂಡಿಲ್ಲ. ಇನ್ನು ಬೇರೆಯವರು ಹೇಗೆ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದರು.

Tags:
error: Content is protected !!