ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ವಿಚಾರ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ. ನಾಯಕ ಸಮುದಾಯಕ್ಕೆ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಬೇಡಿಕೆಯಾಗಿದ್ದು, ದಕ್ಷಿಣ ಭಾಗದಲ್ಲಿ ನಾಯಕ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಅವಕಾಶ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್ ಚಿಕ್ಕಮಾದು
ಇನ್ನು ಮುಂದುವರಿದು ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರಬೇಕು. ಜನಾಭಿಪ್ರಾಯ ಸಿದ್ದರಾಮಯ್ಯ ಪರ ಇದೆ. ನವೆಂಬರ್.20ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಾರೆ. ಆಗ ಇದನ್ನ ಅವರೇ ಹೇಳಬಹುದು. ಮುಂದಿನ ಚುನಾವಣೆಯಲ್ಲೂ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ. ಸಿದ್ದರಾಮಯ್ಯನವರ ಅವಶ್ಯಕತೆ ಪಕ್ಷಕ್ಕೆ ಇದೆ. ಮುಂದಿನ ಅವಧಿಯಲ್ಲಿ ಬೇರೆಯವರಿಗೆ ಸಿಎಂ ಅವಕಾಶ ಸಿಗಬಹುದು. 2028ಕ್ಕೆ ಸತೀಶ್ ಜಾರಿಕಿಹೊಳಿ ಸಿಎಂ ಆಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಸಮುದಾಯದಲ್ಲಿ ಸಿಎಂ ಸ್ಥಾನಕ್ಕೆ ಅರ್ಹ ಇರುವ ವ್ಯಕ್ತಿ ಸತೀಶ್ ಜಾರಕಿಹೊಳಿ. ಸಿಎಂ ಸಿದ್ದರಾಮಯ್ಯನವರಂತೆ ಸತೀಶ್ ಜಾರಕಿಹೊಳಿ ಸಾಮಾಜಿಕ ಬದ್ಧತೆಯನ್ನು ಹೊಂದಿದ್ದಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.





