ಮೈಸೂರು ನಗರ

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಮೈಸೂರು: ನಾನು ಕೂಡ ಸಚಿವ ಸ್ಥಾನ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ವಿಚಾರ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತೇನೆ‌. ನಾಯಕ ಸಮುದಾಯಕ್ಕೆ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಬೇಡಿಕೆಯಾಗಿದ್ದು, ದಕ್ಷಿಣ ಭಾಗದಲ್ಲಿ ನಾಯಕ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಅವಕಾಶ ಸಿಗುತ್ತೆ ಎನ್ನುವ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಇನ್ನು ಮುಂದುವರಿದು ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರಬೇಕು. ಜನಾಭಿಪ್ರಾಯ ಸಿದ್ದರಾಮಯ್ಯ ಪರ ಇದೆ. ನವೆಂಬರ್.20ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಾರೆ. ಆಗ ಇದನ್ನ ಅವರೇ ಹೇಳಬಹುದು. ಮುಂದಿನ ಚುನಾವಣೆಯಲ್ಲೂ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ. ಸಿದ್ದರಾಮಯ್ಯನವರ ಅವಶ್ಯಕತೆ ಪಕ್ಷಕ್ಕೆ ಇದೆ. ಮುಂದಿನ ಅವಧಿಯಲ್ಲಿ ಬೇರೆಯವರಿಗೆ ಸಿಎಂ ಅವಕಾಶ ಸಿಗಬಹುದು. 2028ಕ್ಕೆ ಸತೀಶ್ ಜಾರಿಕಿಹೊಳಿ ಸಿಎಂ ಆಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಸಮುದಾಯದಲ್ಲಿ ಸಿಎಂ‌ ಸ್ಥಾನಕ್ಕೆ ಅರ್ಹ ಇರುವ ವ್ಯಕ್ತಿ ಸತೀಶ್ ಜಾರಕಿಹೊಳಿ. ಸಿಎಂ ಸಿದ್ದರಾಮಯ್ಯನವರಂತೆ ಸತೀಶ್‌ ಜಾರಕಿಹೊಳಿ ಸಾಮಾಜಿಕ ಬದ್ಧತೆಯನ್ನು ಹೊಂದಿದ್ದಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ತಲೆತಗ್ಗಿಸುವ ಘಟನೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತೆ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…

1 hour ago

ಏಪ್ರಿಲ್‌ನಿಂದ ಮೊದಲ ಹಂತದ ಜನಗಣತಿ ಆರಂಭ

ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್‌ 1 ರಿಂದ ಸೆಪ್ಟೆಂಬರ್.‌30ರವರೆಗೆ ಎಲ್ಲಾ…

2 hours ago

ಬಳ್ಳಾರಿ ಫೈರಿಂಗ್‌ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್‌ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ…

2 hours ago

ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ

ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್‌ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…

2 hours ago

ಮದ್ದೂರು| ಪೊಲೀಸ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ: ಸಹೋದ್ಯೋಗಿ ವಿರುದ್ಧ ದೂರು ದಾಖಲು

ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್‌ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…

3 hours ago