ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಇನ್ನೊಂದೆಡೆ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಕೇಳಿಬರುತ್ತಿದೆ.
ಇನ್ನು ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಹೀಗಿರುವಾಗಲೇ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಕುಟುಂಬದವರು ನಿಲ್ಲಲ್ಲ. ಎಲ್ಲಿ ಹೋದರೂ ನನ್ನ ಹೆಸರೇ ಓಡಾಡುತ್ತಿದೆ. ಹಾಗಾಗಿ ನಾನೇ ಅಭ್ಯರ್ಥಿ ಎಂದರು.
ಈ ಮೂಲಕ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಡಿಕೆಶಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…