ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ ಆಯ್ಕೆ ಆಗಿರುವುದು. ಅದನ್ನು ನಾವು ಹಲವು ಬಾರಿ ಹೇಳಿದ್ದೇವೆ. ಮುಖ್ಯಮಂತ್ರಿಗಳು ಕೂಡ ಹಲವು ಬಾರಿ ಹೇಳಿದ್ದಾರೆ. ಮತ್ತೆ ಮತ್ತೆ ಈ ಪ್ರಶ್ನೆಗಳನ್ನು ಕೇಳುವುದು ಬೇಡ. ಈ ರೀತಿಯ ಎಲ್ಲಾ ಚರ್ಚೆಗಳು ನಿಲ್ಲಬೇಕಿದೆ. ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಆ ರೀತಿ ಮಾತನಾಡಿಲ್ಲ. ನಾನು ಅಧಿಕಾರ ಹಂಚಿಕೆಯ ನಿರ್ಧಾರ ಮಾಡುವ ಸ್ಥಾನದಲ್ಲೂ ನಾನು ಇಲ್ಲ. ನಾನು ಯಾವ ಸಿಎಂ ರೇಸ್‌ನಲ್ಲೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಕೆಪಿಸಿಸಿ ರೇಸ್‌ನಲ್ಲಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಅದು ಚರ್ಚೆಯ ಹಂತದಲ್ಲೂ ಇಲ್ಲ. ಅದೆಲ್ಲ ಬಂದಾಗ ನೋಡೊಣ ಎಂದು ಹೇಳಿದರು.
ಇನ್ನು ಬಳ್ಳಾರಿ ಗಲಾಟೆ ಪ್ರಕರಣವನ್ನು ನ್ಯಾಯಾಧೀಶರ ತನಿಖೆಗೆ ಬಿಜೆಪಿ ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇನ್ನು ವರದಿ ಬಂದಿಲ್ಲ. ವರದಿ ಬಂದ ಬಳಿಕ ನೋಡೋಣ. ಸರಿಯಾದ ರೀತಿ ತನಿಖೆ ಆಗ್ತಿದೆ. ಸಿಎಂ ಹಾಗೂ ಡಿಸಿಎಂ ಇದ್ದಾರೆ. ಅವರು ಈ ಬಗ್ಗೆ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…