ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ ಸ್ಥಿತಿ ಬರಬಾರದಿತ್ತು. ಮೈಸೂರಿಗನಾಗಿ, ಕನ್ನಡಿಗನಾಗಿ ನನಗೆ ಸಿಎಂ ಸ್ಥಿತಿ ಕಂಡು ಬೇಸರವಾಗಿದೆ. ಇಂದಿರಾಗಾಂಧಿ, ಸೋನಿಯಾ ಗಾಂಧಿಯನ್ನೇ ಟೀಕೆ ಮಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಅವರ ಮೊಮ್ಮಗನ ಪಾದ ಪೂಜೆ ಮಾಡಲು ಸಿದ್ಧವಾಗಿರೋದು ಬೇಸರ ತಂದಿದೆ. ಸಿಎಂ ಸಿದ್ದರಾಮಯ್ಯ ಅವರೇ ನೀವು ಹುಲಿಯಾನಾ ಇಲಿಯಾನಾ ಹೇಳಿ? ಕಳೆದ 2013ರಲ್ಲಿ ಸಿದ್ದರಾಮಯ್ಯ ಹುಲಿಯಾ ಆಗಿದ್ದರು. ಈಗ ಸಿದ್ದರಾಮಯ್ಯ ಇಲಿಯಾಗಿದ್ದಾರೆ. ರಾಹುಲ್ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ ಎಂದು ಹೇಳಿದರು.
ಇದನ್ನು ಓದಿ: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಕೇಂದ್ರವೇ ತನಿಖೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯ
ಇನ್ನು ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾವಂತರೆ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಇದು ಬಹಳ ಅಪಾಯಕಾರಿ. ಮುಸ್ಲಿಂಮರ ಸಮಸ್ಯೆ ಬಡತನ ಅಲ್ಲ. ಅವರ ಒಳಗಿನ ಧರ್ಮಾಂಧತೆ, ಅವರ ಮನಃಸ್ಥಿತಿಯೆ ಅವರ ಸಮಸ್ಯೆ. ವಿದ್ಯಾವಂತ ಮುಸ್ಲಿಂಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಹಿಂದೂ ರಾಷ್ಟ್ರ ಆಗಲು ಬಿಡಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರಾ? ಸಿದ್ದರಾಮಯ್ಯರಂತಹ ನಾಯಕರು ಇರುವಾಗ ದೇಶದ ಒಳಗೆ ಇಂತಹ ಪರಿಸ್ಥಿತಿಯನ್ನು ನಾವು ಎದುರಿಸಲೇಬೇಕು.
ಸಿದ್ದರಾಮಯ್ಯ ಸರ್ಕಾರದ ಯೋಗ್ಯತೆಗೆ ಜೈಲಿನಲ್ಲಿನ ಭಯೋತ್ಪಾದಕನನ್ನೆ ಬಿಗಿ ಹಿಡಿಯಲು ಆಗುತ್ತಿಲ್ಲ. ಇನ್ನೂ ಇವರೇನೂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡೋದು. ಯುಪಿಎ ಸರಕಾರದಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ ಮೊದಲ ದೊಡ್ಡ ಸ್ಫೋಟ ಇದು. ಭಾರತದ ಒಳಗಿನ ಮುಲ್ಲಾಗಳೇ ಈ ರೀತಿಯ ಸ್ಫೋಟಕ್ಕೆ ತಯಾರಾಗುತ್ತಿದ್ದಾರೆ. ಮೊದಲು ಭಾರತದೊಳಗೆ ಬಾಂಬ್ ಇಡಲು ಪಾಕಿಸ್ತಾನದಿಂದ ಬರುತ್ತಿದ್ದರು. ಈಗ ನಮ್ಮ ದೇಶದೊಳಗೆ ಇಂತವರು ತಯಾರಾಗಿದ್ದಾರೆ. ದೇಶದ ಒಳಗಡೆ ಇಡುವವರೆ ಬಾಂಬ್ ಇಡಲು ಹೊರಟರೆ ಮೋದಿ ಅದನ್ನು ತಡಿಯಲು ಆಗುತ್ತಾ? ಎಂದು ಪ್ರಶ್ನೆ ಮಾಡಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…