ಮೈಸೂರು ನಗರ

ನಾನು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ

ಮೈಸೂರು: ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಪಕ್ಷ ಸೇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಚಾಮುಂಡಿ ತಾಯಿಗೆ ಅವಮಾನಿಸಿ ಮಹಿಷ ದಸರಾ ಮಾಡಲು ಮುಂದಾಗಿದ್ದರು. ಅಂದು ಕೂಡ ಅದನ್ನು ವಿರೋಧ ಮಾಡಿದ್ದು, ಮಹಿಷ ದಸರಾ ಮಟ್ಟ ಹಾಕಿದ್ದು ನಾನು. ಅರಮನೆ ಕೂಡ ಅದರ ಬಗ್ಗೆ ಚಕಾರ ಎತ್ತಲಿಲ್ಲ. ಪ್ರತಾಪ್ ಸಿಂಹ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಅನಿವಾರ್ಯತೆ ಇಲ್ಲ. ನನ್ನ ತಂದೆ ಕೂಡ ಜನಸಂಘದಿಂದ ಬಂದಿರೋರು. ನಾನು ಕಾಂಗ್ರೆಸ್‌ಗೆ ಹೋಗಬೇಕು ಅಂತಿದ್ರೆ ಚುನಾವಣೆ ಸಮಯದಲ್ಲೇ ಹೋಗ್ತಿದ್ದೆ. ಟಿಕೆಟ್ ಕೊಡ್ತೀವಿ ಬನ್ನಿ ಅಂತ ಸಾಕಷ್ಟು ಜನ ಕರೆದ್ರು ಅಂತಹ ಸಮಯದಲ್ಲೇ ಹೋಗಲಿಲ್ಲ ಎಂದು ಹೇಳಿದರು.

ಇನ್ನು ವಿ.ಸೋಮಣ್ಣ ವರುಣದಲ್ಲಿ ಚುನಾವಣೆ ನಿಂತಾಗ ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದವನು ನಾನು. ನನ್ನ ಮೇಲೆ ಸಾಕಷ್ಟು ಕೇಸ್ ಹಾಕಿಸಿದ್ರು. ಈಗಲೂ ಸಹ ಕೇಸ್ ಹಾಕಿಸಿದ್ದಾರೆ. ನಾನು ಬದ್ಧತೆಯಿರುವ ವ್ಯಕ್ತಿ. ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದ ಕೆಲವರು ಬಕೆಟ್ ಹಿಡಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಮಾತು ಸಭ್ಯತೆ ಮೀರಬಾರದು ಎಂದು ಸ್ವಪಕ್ಷದ ನಾಯಕರ ಹೇಳಿಕೆಗೆ ಕಿಡಿಕಾರಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago