Mysore
31
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

mla harish gowda

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ 136 ಶಾಸಕರುಗಳು ಬದ್ದ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ರಾಹುಲ್‌ಗಾಂಧಿ, ಸೋನಿಯಾಗಾಂಧಿ, ಎಂ.ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್. ನಮಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೈಕಮಾಂಡ್ ಆಗಿದ್ದಾರೆ. ನಾವ್ಯಾರು ನೇರವಾಗಿ ಭೇಟಿ ಮಾಡುವವರಲ್ಲ. ಹೀಗಾಗಿ, ನಮ್ಮ ನಾಯಕರು ಹೇಳುವ ಮಾತು ಅಂತಿಮವಾಗಿದೆ ಎಂದು ತಿಳಿಸಿದರು.

ಹದಿನೈದು ವರ್ಷವು ಅವೇ ಸಿಎಂ 

ಸಿದ್ದರಾಮಯ್ಯ ಅವರು ಐದು ವರ್ಷಗಳ ಮಾತ್ರವಲ್ಲ. ಮುಂದಿನ ಹತ್ತು ಹದಿನೈದು ವರ್ಷಗಳ ಕಾಲವೂ ಮುಖ್ಯಮಂತ್ರಿಯಾಗಿ ಇರಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದರು.

 

ವಿದೇಶ ಪ್ರವಾಸ ಹೊಸದಲ್ಲ

ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವುದು ಹೊಸತೇನಲ್ಲ. ನಾನು ಕೂಡ ಆರು ತಿಂಗಳ ಹಿಂದೆ ಫಾರಿನ್ ಟೂರ್‌ಗೆ ಹೋಗಿ ಬಂದಿದ್ದೇನೆ. ಶಾಸಕರ ವಿದೇಶ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾಯಕತ್ವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು.

ಬಜೆಟ್‌ನಲ್ಲಿ ಮೈಸೂರಿಗೆ ಹೆಚ್ಚಿನ ಅನುದಾನ 
ಮೈಸೂರು ನಗರದ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಅನುದಾನ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಫೈ ಓವರ್ ನಿರ್ಮಾಣ, ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಅನುದಾನ ಕೇಳಲಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಯಾರೋ ಹೇಳುತ್ತಾರೆಂದು ಕಿವಿಗೊಡುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹ ಹೆಸರೇಳದೆ ಟೀಕಿಸಿದರು.

 

Tags:
error: Content is protected !!