mla harish gowda
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ 136 ಶಾಸಕರುಗಳು ಬದ್ದ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ರಾಹುಲ್‌ಗಾಂಧಿ, ಸೋನಿಯಾಗಾಂಧಿ, ಎಂ.ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್. ನಮಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೈಕಮಾಂಡ್ ಆಗಿದ್ದಾರೆ. ನಾವ್ಯಾರು ನೇರವಾಗಿ ಭೇಟಿ ಮಾಡುವವರಲ್ಲ. ಹೀಗಾಗಿ, ನಮ್ಮ ನಾಯಕರು ಹೇಳುವ ಮಾತು ಅಂತಿಮವಾಗಿದೆ ಎಂದು ತಿಳಿಸಿದರು.
ಹದಿನೈದು ವರ್ಷವು ಅವೇ ಸಿಎಂ
ಸಿದ್ದರಾಮಯ್ಯ ಅವರು ಐದು ವರ್ಷಗಳ ಮಾತ್ರವಲ್ಲ. ಮುಂದಿನ ಹತ್ತು ಹದಿನೈದು ವರ್ಷಗಳ ಕಾಲವೂ ಮುಖ್ಯಮಂತ್ರಿಯಾಗಿ ಇರಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದರು.
ವಿದೇಶ ಪ್ರವಾಸ ಹೊಸದಲ್ಲ
ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವುದು ಹೊಸತೇನಲ್ಲ. ನಾನು ಕೂಡ ಆರು ತಿಂಗಳ ಹಿಂದೆ ಫಾರಿನ್ ಟೂರ್‌ಗೆ ಹೋಗಿ ಬಂದಿದ್ದೇನೆ. ಶಾಸಕರ ವಿದೇಶ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾಯಕತ್ವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು.
ಬಜೆಟ್‌ನಲ್ಲಿ ಮೈಸೂರಿಗೆ ಹೆಚ್ಚಿನ ಅನುದಾನ
ಮೈಸೂರು ನಗರದ ಅಭಿವೃದ್ದಿಗೆ ಮುಖ್ಯಮಂತ್ರಿಗಳು ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಅನುದಾನ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಫೈ ಓವರ್ ನಿರ್ಮಾಣ, ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಅನುದಾನ ಕೇಳಲಾಗಿದೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಕ್ಷೇತ್ರದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಯಾರೋ ಹೇಳುತ್ತಾರೆಂದು ಕಿವಿಗೊಡುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹ ಹೆಸರೇಳದೆ ಟೀಕಿಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…