Mysore
19
broken clouds

Social Media

ಭಾನುವಾರ, 11 ಜನವರಿ 2026
Light
Dark

ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಡಾ ಪ್ರಕರಣದ ಸಂಕಷ್ಟ ಎದುರಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.

ನಗರದ ಕಲಾಮಂದಿರದಲ್ಲಿ ಇಂದು ಆಯೋಜಿಸಲಾಗಿದ್ದ ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ನೋಡಿ ಸಚಿವ ಸಂಪುಟದಲ್ಲಿ ಚರ್ಚಿಸಿ ಆ ನಂತರ ಅದನ್ನು ಜಾರಿಗೆ ತರುತ್ತೇನೆ. ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ಜಾರಿ ನಮ್ಮ ಪಕ್ಷದ ಅಜೆಂಡಾವಾಗಿದೆ. ಹೀಗಾಗಿ ನಾನು ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಿಸಿದರು.

ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ರಾಜ್ಯ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಸಲ್ಲಿಸಿದ್ದಾರೆ. ವರದಿಯಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳ ನಡುವೆ ಕೋಲಾಹಲವನ್ನು ಸೃಷ್ಠಿಸಿದೆ. ಜಾತಿಗಣತಿ ಸಮೀಕ್ಷೆಯ ಪ್ರಕಾರ ಲಿಂಗಾಯತ ಜನಸಂಖ್ಯೆ 65 ಲಕ್ಷ(10.9%) ಮತ್ತು ಒಕ್ಕಲಿಗರ ಜನಸಂಖ್ಯೆ 60 ಲಕ್ಷ(10%) ಇದ್ದಾರೆ ಎಂಬ ಮಾಹಿತಿ ವರದಿಯಲ್ಲಿ ಹೇಳಲಾಗಿದೆ.

ಈ ವರದಿಯ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗಿದ್ದು, ಕೆಲವರು ಜಾರಿ ಮಾಡಲೇಬೇಕು ಎಂದು ಪಟ್ಟು ಹಿಡಿದ್ದಾರೆ. ಇನ್ನೂ ಕೆಲವರು ಇದನ್ನು ತಿರಸ್ಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ವರದಿಯನ್ನು ಜಾರಿ ಮಾಡುತ್ತೇನೆ ಎಂದು ಘೋಷಿಸಿದ್ದಾರೆ.

 

Tags:
error: Content is protected !!