prathap simha
ಮೈಸೂರು : ನಾನು ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ರಾಷ್ಟ್ರ ಮಟ್ಟಕ್ಕೆ ಹೋಗಲಿಲ್ಲ ಅಂದ್ರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಆಗುತ್ತಾ? ಸ್ಥಳೀಯ ಮಟ್ಟಕ್ಕೆ ಬರಬೇಕಲ್ಲವೇ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ ಪ್ರಶ್ನಿಸಿದ್ದಾರೆ.
ಮಾಜಿ ಶಾಸಕರಾದ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಈ ಹಿಂದೆ ಕೂಡ ತಿಳಿಸಿದಂತೆ ರಾಜ್ಯ ರಾಜಕಾರಣಕ್ಕೆ ಪ್ರವೇಶವಾಗಿದೆ. ಚಾಮರಾಜ ಕ್ಷೇತ್ರ ಸುಶಿಕ್ಷಿತರ ಕ್ಷೇತ್ರವಾಗಿದೆ. ಐದು ವರ್ಷಕ್ಕೊಮ್ಮೆ ಬದಲಾಗುವ ಶಾಸಕರು ಈ ಕ್ಷೇತ್ರಕ್ಕೆ ಬೇಡ. ಶಂಕರಲಿಂಗೇಗೌಡರ ರೀತಿ ಐದು ಬಾರಿ ಆದ ಅಭಿವೃದ್ಧಿ ಮಾಡುವ ಶಾಸಕರು ಬೇಕು. ಜನ ಕವರ್‌ಗೆ ಕಾಸು ಹಾಕಿ ಕೊಡುವುದಕ್ಕೆ ಅಪೇಕ್ಷೆ ಪಡುವ ಮತದಾರರಿಲ್ಲ. ಈ ಕ್ಷೇತ್ರದ ಮನೆ, ಕಚೇರಿ ತೆರೆಯುತ್ತೇನೆ. ಟಿಕೆಟ್ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
ರಾಷ್ಟ್ರಮಟ್ಟದಿಂದ ರಾಜ್ಯ ಮಟ್ಟದ ರಾಜಕೀಯಕ್ಕೆ ಕಾಲಿಟ್ಟಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಚಾಮರಾಜ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲೆ ಅದೇ ಕ್ಷೇತ್ರದ ಮಾಜಿ ಶಾಸಕ ಎಲ್.ನಾಗೇಂದ್ರ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದಿದ್ದಾರೆ. ಸದ್ಯ ಇಬ್ಬರ ಮಾತಿನ ಸಮರ ತಾರಕಕ್ಕೇರಿದೆ. ಇದು ಹೈಕಮಾಂಡ್ ಮುಟ್ಟುತ್ತಾ ಎಂದು ಕಾದು ನೋಡಬೇಕಿದೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…