Mysore
32
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

IAS,KAS :ಏ.21ಕ್ಕೆ ಪರೀಕ್ಷಾ ಸಿದ್ಧತೆ ಕುರಿತು ಸಂವಾದ ನಡೆಸಲಿರುವ 1rank IAS ಅಧಿಕಾರಿ

IAS exam realted discussion

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏ.21ರಂದು ಬೆಳಿಗ್ಗೆ 10 ಗಂಟೆಗೆ ಸಂವಾದ ಕಾರ್ಯಕ್ರಮವನ್ನು ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

50 ದಿನಗಳ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿರುವ 2017ನೇ ಬ್ಯಾಚ್ ನ ಕೋಲಾರ ಮೂಲದ ಐಎಎಸ್ ಅಧಿಕಾರಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ‘ಪರೀಕ್ಷಾ ಸಿದ್ಧತೆ’ ಕುರಿತು ಶಿಬಿರಾರ್ಥಿಗಳಿಗೆ ಸಂವಾದ ನಡೆಸಲಿದ್ದಾರೆ.

ಪರೀಕ್ಷಾ ತಯಾರಿ ಕ್ರಮದ ಬಗ್ಗೆ ಮೈಸೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಮಾರ್ಗದರ್ಶನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಎ.ಹಲಸೆ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಉಪಸ್ಥಿತರಿರಲಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!