IAS exam realted discussion
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಏ.21ರಂದು ಬೆಳಿಗ್ಗೆ 10 ಗಂಟೆಗೆ ಸಂವಾದ ಕಾರ್ಯಕ್ರಮವನ್ನು ಮುಕ್ತ ಗಂಗೋತ್ರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
50 ದಿನಗಳ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿರುವ 2017ನೇ ಬ್ಯಾಚ್ ನ ಕೋಲಾರ ಮೂಲದ ಐಎಎಸ್ ಅಧಿಕಾರಿ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ‘ಪರೀಕ್ಷಾ ಸಿದ್ಧತೆ’ ಕುರಿತು ಶಿಬಿರಾರ್ಥಿಗಳಿಗೆ ಸಂವಾದ ನಡೆಸಲಿದ್ದಾರೆ.
ಪರೀಕ್ಷಾ ತಯಾರಿ ಕ್ರಮದ ಬಗ್ಗೆ ಮೈಸೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಮಾರ್ಗದರ್ಶನ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ಎ.ಹಲಸೆ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಉಪಸ್ಥಿತರಿರಲಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…