ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಿಎಂ ಅನ್ನೋದು ಒಂದು ಹುದ್ದೆ ಅಲ್ಲ. ರಾಜ್ಯಕ್ಕೆ ದಿಕ್ಕು ದೆಸೆ ತೋರಿಸುವ ಹುದ್ದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನಗೆ ಸಚಿವ ಸ್ಥಾನದ ಬಗ್ಗೆ ಸಾಕಷ್ಟು ಆಸೆಯಿದೆ. ಆದರೆ ಸದ್ಯಕ್ಕೆ ಯಾವುದು ಖಾಲಿಯಿಲ್ಲ. ನನಗೆ ಸಚಿವ ಸ್ಥಾನ ನೀಡಿದರೆ ನಿಭಾಯಿಸುವೆ ಎಂದರು.