Mandya: Police raid prostitution ring: Two women rescued
ಮೈಸೂರು : ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ಯುವಕನನ್ನು ಬಂಧಿಸಿರುವ ಜಯಪುರ ಠಾಣಾ ಪೊಲೀಸರು, ಅವರಿಂದ 5.5 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಧನಗಳ್ಳಿ ಗ್ರಾಮದ ಬಳಿ ಯುವಕನೋರ್ವ ಪ್ಯಾಸೆಂಜರ್ ಆಟೋದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಬಂದಿದೆ. ಕೂಡಲೇ ಪೊಲಿಸರ ತಂಡ ಸ್ಥಳಕ್ಕೆ ತೆರಳಿದೆ. ಈ ವೇಳೆ ಪ್ಯಾಸೆಂಜರ್ ಆಟೋ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ಕಿಯನ್ನು ಸಾಗಿಸುತ್ತಿದ್ದ ಗೌಸಿಯಾನಗರ ನಿವಾಸಿ ಫರ‍್ಹಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಹಳ್ಳಿ ಹಳ್ಳಿಗೆ ತೆರಳಿ ಅಲ್ಲಿನ ಜನರಿಂದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತೇವೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.
ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಪ್ರಕರಣದಲ್ಲಿ ಬಾಗಿಯಾಗಿರುವ ಮತ್ತೊಬ್ಬ ಆರೋಪಿ ಗೌಸಿಯಾನಗರ ನಿವಾಸಿ ಮಯೂಬ್ ಎಂಬಾತನ ಪತ್ತೆಗೆ ಮುಂದಾಗಿದ್ದಾರೆ.
ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…
ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…
ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…
ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್…
ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್, ಈಗ ಇರಾನ್ ಮೇಲಿನ ದಾಳಿಗಳನ್ನು…