Mysore
27
few clouds

Social Media

ಭಾನುವಾರ, 10 ನವೆಂಬರ್ 2024
Light
Dark

ಪ್ರಭಾವಿಗಳ ಕೈವಾಡದಿಂದಲೇ ರಾಜ್ಯಪಾಲರು ಪ್ಯಾಸಿಕ್ಯುಷನ್‌ಗೆ ಅನುಮತಿ ಕೊಟ್ಟಿದ್ದಾರೆ: ಎಂ.ಲಕ್ಷ್ಮಣ್‌ ಗಂಭೀರ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ವಿಜಯೇಂದ್ರ ಹಾಗೂ ಅಶೋಕ್‌ ಸೇರಿದಂತೆ ಹಲವರು ಪ್ರಭಾವಿಗಳು ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಬಿಜೆಪಿಯವರು ಬ್ಲೂ ಪ್ರಿಂಟ್‌ ರೆಡಿ ಮಾಡಿಕೊಂಡಿದ್ದರು. ರಾಜಭವನವನ್ನು ಬಿಜೆಪಿ ಹಾಗೂ ಜೆಡಿಎಸ್‌ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಬಿಜೆಪಿ ಹಾಗೂ ಜೆಡಿಸ್‌ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಟಾರ್ಗೆಟ್‌ ಮಾಡಲಾಗುತ್ತದೆ ಎಂದು ಗಂಭೀರ ಆರೋಪ ಮಾಡಿದರು.

ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಅವರೆಲ್ಲಾ ಮುಂದಾಗಿದ್ದಾರೆ. ಈ ಬೆಳವಣಿಗೆಗಳು ನಡೆದ ಮೇಲೆ ನಾವು ಇನ್ನೂ ಸ್ಟ್ರಾಂಗ್‌ ಆಗುತ್ತೇವೆ. ರಾಜ್ಯಾದ್ಯಂತ ನಮ್ಮ ಪ್ರತಿಭಟನೆಗಳು ಪ್ರಾರಂಭ ಆಗುತ್ತವೆ. ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಅವರ ಪರ ಇದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದರು.

 

 

 

Tags: