ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಹಾಗೂ ಅಶೋಕ್ ಸೇರಿದಂತೆ ಹಲವರು ಪ್ರಭಾವಿಗಳು ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬೆನ್ನಲ್ಲೇ ಬಿಜೆಪಿಯವರು ಬ್ಲೂ ಪ್ರಿಂಟ್ ರೆಡಿ ಮಾಡಿಕೊಂಡಿದ್ದರು. ರಾಜಭವನವನ್ನು ಬಿಜೆಪಿ ಹಾಗೂ ಜೆಡಿಎಸ್ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಬಿಜೆಪಿ ಹಾಗೂ ಜೆಡಿಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಲಾಗುತ್ತದೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಅವರೆಲ್ಲಾ ಮುಂದಾಗಿದ್ದಾರೆ. ಈ ಬೆಳವಣಿಗೆಗಳು ನಡೆದ ಮೇಲೆ ನಾವು ಇನ್ನೂ ಸ್ಟ್ರಾಂಗ್ ಆಗುತ್ತೇವೆ. ರಾಜ್ಯಾದ್ಯಂತ ನಮ್ಮ ಪ್ರತಿಭಟನೆಗಳು ಪ್ರಾರಂಭ ಆಗುತ್ತವೆ. ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಅವರ ಪರ ಇದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದರು.
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…
ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ…
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ…
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…