Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕಾವೇರಿ ನದಿಯಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಅಸ್ಥಿ ವಿಸರ್ಜನೆ

ಮೈಸೂರು: ಕನ್ನಡ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು.

ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅವರು ಅಸ್ಥಿ ವಿಸರ್ಜಿಸಿದರು.

ಇದನ್ನು ಓದಿ : ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ

ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್.‌24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿತು. ಸಕಲ ಸರ್ಕಾರ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಈ ಹಿನ್ನೆಲೆಯಲ್ಲಿ ಇಂದು ಕಾವೇರಿ ನದಿಯಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು.

Tags:
error: Content is protected !!