ಮೈಸೂರು: ಕನ್ನಡ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಯಿತು.
ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅವರು ಅಸ್ಥಿ ವಿಸರ್ಜಿಸಿದರು.
ಇದನ್ನು ಓದಿ : ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ
ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್.24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ನಿನ್ನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನೆರವೇರಿತು. ಸಕಲ ಸರ್ಕಾರ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.
ಈ ಹಿನ್ನೆಲೆಯಲ್ಲಿ ಇಂದು ಕಾವೇರಿ ನದಿಯಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು.
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…