raghu kautilya
ಮೈಸೂರು: ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ ಲೇವಡಿ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿವಾದಿತ ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕೈಬಿಡಲು ನಿರ್ಧರಿಸಿದೆ. ಈ ನಿರ್ಧಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಘೋಷಿಸಿದ್ದು, ಹಲವು ಗೊಂದಲಗಳನ್ನು ಹುಟ್ಟುಹಾಕಿದೆ. ರಾಜ್ಯ ಸಚಿವ ಸಂಪುಟ ಕೈಗೊಳ್ಳಬೇಕಾದ ನಿರ್ಣಯವನ್ನು ವೇಣುಗೋಪಾಲ್ ಹೇಗೆ ಪ್ರಕಟಿಸಿದರು? ಎಂದು ಪ್ರಶ್ನಿಸಿದರು.
ಇನ್ನು ಬೆಂಗಳೂರು ಕಾಲ್ತುಳಿತ ಪ್ರಕಣದಿಂದ ಕಾಂಗ್ರೆಸ್ ಪಕ್ಷದ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ಹರಾಜಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ವಿಷಯಾಂತರ ಮಾಡಲು ಹೈಕಮಾಂಡ್ ಮುಂದಾಗಿದೆ. ಮರು ಜಾತಿಗಣತಿ ಹೆಸರಿನಲ್ಲಿ ಹಿಂದುಳಿದ ಜಾತಿಗಳನ್ನು ಯಾಮಾರಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…