ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಹಾಜರಿದ್ದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಗರದಲ್ಲಿ ನಡೆದ ಗಂಭೀರ ಪ್ರಕರಣಗಳ ಕುರಿತು ವಿವರವಾದ ಮಾಹಿತಿ ಪಡೆದರು.
ಮೈಸೂರಿನಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ನಗರದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಳ್ಳದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಹಾಗೂ ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಎಲ್.ನಾಗೇಂದ್ರ ಉಪ ಪೊಲೀಸ್ ಆಯುಕ್ತರಾದ ಬಿಂದುಮಣಿ ಹಾಗೂ ಸುಂದರ್‌ರಾಜ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.





