ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಯುವಕರಿಂದ ಅಸಭ್ಯ ವರ್ತನೆ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಾಮುಂಡಿಬೆಟ್ಟಕ್ಕೆ ಬರುತ್ತಿದ್ದ ಹೊರ ರಾಜ್ಯದ ಸುಮಾರು ಐದರಿಂದ ಆರು ಮಂದಿ ಯುವಕರು ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದರು. ಇದರಿಂದ ಬೆಟ್ಟಕ್ಕೆ ತೆರಳುವ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯುವಕರ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದರು.

ಇದನ್ನೂ ಓದಿ:- ಪ್ರವಾಸದ ಆಸೆ ತೋರಿಸಿ ಗ್ರಾಹಕರಿಗೆ ಮೋಸ: 5 ಲಕ್ಷಕ್ಕೂ ಅಧಿಕ ವಂಚನೆ

ಸಾರ್ವಜನಿಕರ ದೂರಿನ ಮೇರೆಗೆ ಚಾಮುಂಡಿಬೆಟ್ಟ ಉಪ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಹೊರ ರಾಜ್ಯದ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆ ಯುವಕರಿಗೆ ತಿಳುವಳಿಕೆ ಹೇಳಿ ಲಘು ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

21 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

46 mins ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

57 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

1 hour ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

1 hour ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

1 hour ago