ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ ಕೇಂದ್ರವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬ ಯುವಕರು ಜ್ಞಾನದ ಜೊತೆಗೆ ಪ್ರಾಯೋಗಿಕ ಕೌಶಲ್ಯಗಳನ್ನು ಹೊಂದಿದಾಗ ಮಾತ್ರ ಕೌಶಲ್ಯಯು ಭಾರತ ಸಮರ್ಥ ಭಾರತದ ಕನಸು ನನಸಾಗುತ್ತದೆ ಎಂದರು.
ಭಾರತದ ಜನಸಂಖ್ಯೆಯಲ್ಲಿ ಸುಮಾರು 65 ಪ್ರತಿಶತದಷ್ಟು ಜನಸಂಖ್ಯೆಯು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇಷ್ಟು ದೊಡ್ಡ ಯುವಜನರಿಗೆ ಸರಿಯಾದ ದಿಕ್ಕಿನಲ್ಲಿ ತರಬೇತಿ ನೀಡಿದರೆ, ಭಾರತವನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ತಾಂತ್ರಿಕವಾಗಿ ಬಲಿಷ್ಠಗೊಳಿಸಬಹುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಾರಂಭದಿಂದಲೂ ಎಲ್ಲರಿಗೂ, ಎಲ್ಲೆಡೆಯೂ ಉನ್ನತ ಶಿಕ್ಷಣ ಎಂಬ ತನ್ನ ಧ್ಯೇಯವಾಕ್ಯವನ್ನು ಗಮನದಲ್ಲಿಟ್ಟುಕೊಂಡು ನಿರಂತರ ಮತ್ತು ಸಕಾರಾತ್ಮಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ, ಕುಲಪತಿ ಶರಣಪ್ಪ ವಿ ಹಲಸೆ, ಐಎಎಸ್ ಅಧಿಕಾರಿ ನಾಗರಾಜ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





