ಮೈಸೂರು ನಗರ

ಭಾರತವು ವಿಶ್ವದ ಕೌಶಲ್ಯ ರಾಜಧಾನಿಯಾಗುವತ್ತ ಸಾಗುತ್ತಿದೆ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

ಮೈಸೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ದಿ ಸೆಂಟರ್‌ ಫಾರ್‌ ಫ್ಯೂಚರ್‌ ಸ್ಕಿಲ್ಸ್‌ ಕೇಂದ್ರವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಪ್ರತಿಯೊಬ್ಬ ಯುವಕರು ಜ್ಞಾನದ ಜೊತೆಗೆ ಪ್ರಾಯೋಗಿಕ ಕೌಶಲ್ಯಗಳನ್ನು ಹೊಂದಿದಾಗ ಮಾತ್ರ ಕೌಶಲ್ಯಯು ಭಾರತ ಸಮರ್ಥ ಭಾರತದ ಕನಸು ನನಸಾಗುತ್ತದೆ ಎಂದರು.
ಭಾರತದ ಜನಸಂಖ್ಯೆಯಲ್ಲಿ ಸುಮಾರು 65 ಪ್ರತಿಶತದಷ್ಟು ಜನಸಂಖ್ಯೆಯು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇಷ್ಟು ದೊಡ್ಡ ಯುವಜನರಿಗೆ ಸರಿಯಾದ ದಿಕ್ಕಿನಲ್ಲಿ ತರಬೇತಿ ನೀಡಿದರೆ, ಭಾರತವನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ತಾಂತ್ರಿಕವಾಗಿ ಬಲಿಷ್ಠಗೊಳಿಸಬಹುದು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಾರಂಭದಿಂದಲೂ ಎಲ್ಲರಿಗೂ, ಎಲ್ಲೆಡೆಯೂ ಉನ್ನತ ಶಿಕ್ಷಣ ಎಂಬ ತನ್ನ ಧ್ಯೇಯವಾಕ್ಯವನ್ನು ಗಮನದಲ್ಲಿಟ್ಟುಕೊಂಡು ನಿರಂತರ ಮತ್ತು ಸಕಾರಾತ್ಮಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಕಾಶನಾಥ ಸ್ವಾಮೀಜಿ, ಕುಲಪತಿ ಶರಣಪ್ಪ ವಿ ಹಲಸೆ, ಐಎಎಸ್‌ ಅಧಿಕಾರಿ ನಾಗರಾಜ್‌ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

1 hour ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago