ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಭಿಪ್ರಾಯಪಟ್ಟರು.
ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಮ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಶೇಷ ಘಟಕ ಇವುಗಳ ಸಹಯೋಗದಲ್ಲಿ ಮಾನಸಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.
ಅಪಾರವಾದ ಜ್ಞಾನ, ದೂರದೃಷ್ಟಿಯನ್ನು ಹೊಂದಿದ್ದ ಡಾ.ಬಾಬು ಜಗಜೀವನರಾಮ್ ಅವರು ಭಾರತದಲ್ಲಿ ಹಸಿವು ಮತ್ತು ಬಡತನ ತೊಲಗಬೇಕಾದರೆ ಕೃಷಿ ಕ್ಷೇತ್ರ ಅಭಿವೃದ್ಧಿಯಾಗಬೇಕು ಎಂದು ನಂಬಿದ್ದರು. ಅದಕ್ಕಾಗಿ ಸುಧಾರಿತ ಬಿತ್ತನೆ ಬೀಜಗಳು, ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಜೊತೆಗೆ ಸಕಲ ಸವಲತ್ತುಗಳನ್ನೂ ಒದಗಿಸಿ ಭಾರತ ಆಹಾರದಲ್ಲಿ ಸ್ವಾವಂಬಿಯಾಗಲು ಕಾರಣರಾದರು ಎಂದು ತಿಳಿಸಿದರು.
ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಭಾರತದಲ್ಲಿ ದೀರ್ಘಕಾಲದ ವರೆಗೆ ಸಂಸದರಾಗಿ, ವಿವಿಧ ಖಾತೆಗಳ ಸಚಿವರಾಗಿ ಬಡವರು, ಕಾರ್ಮಿಕರು, ದಲಿತರ ಉದ್ಧಾರಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅವಕಾಶ ವಂಚಿತ ಸಮುದಾಯಗಳಿಗೆ ಹಕ್ಕು ಮತ್ತು ಅವಕಾಶಗಳನ್ನು, ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಬದುಕಿನುದ್ದಕ್ಕೂ ಹೋರಾಡಿದರು ಎಂದು ಅವರು ಬಣ್ಣಿಸಿದರು.
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಎಲ್ಲಾ ಹಂತದಲ್ಲಿಯೂ ಜಾತಿಯ ಅವಮಾನವನ್ನು ಅನುಭವಿಸಿದರು. ತಮ್ಮ ವಿದ್ಯಾರ್ಥಿ ದಿಶೆಯಲ್ಲಿಯೇ ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದ ಅವರು ದೇಶದ ಭವಿಷ್ಯ ಮತ್ತು ಶೋಷಿತ ಸಮುದಾಯಗಳ ಬಿಡುಗಡೆಯ ಬಗ್ಗೆ ನಿಶ್ಚಿತ ನಿಲುವನ್ನು ತಳೆದಿದ್ದರು ಎಂದು ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಗಂಗಾಧರ, ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಆರ್.ತಿಮ್ಮರಾಯಪ್ಪ, ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಉಪಕುಲಸಚಿವ ಕೆ.ಎನ್.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…