ಮೈಸೂರು ನಗರ

ಬಾಬುಜಿ ಕಾರ್ಯಕ್ರಮಗಳಿಂದ ಭಾರತ ಆಹಾರದಲ್ಲಿ ಸ್ವಾವಲಂಬಿ: ಎಂ.ಕೆ ಸವಿತಾ

ಮೈಸೂರು: ಭಾರತ ದೇಶ ವಿಶ್ವದಲ್ಲಿಯೇ ಆಹಾರದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಡಾ.ಬಾಬೂ ಜಗಜೀವನ ರಾಮ್ ಅವರ ಹಸಿರುಕ್ರಾಂತಿ ಕಾರ್ಯಕ್ರಮ ಮುಖ್ಯ ಕಾರಣ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಮ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿಶೇಷ ಘಟಕ ಇವುಗಳ ಸಹಯೋಗದಲ್ಲಿ ಮಾನಸಗಂಗೋತ್ರಿಯ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದರು.

ಅಪಾರವಾದ ಜ್ಞಾನ, ದೂರದೃಷ್ಟಿಯನ್ನು ಹೊಂದಿದ್ದ ಡಾ.ಬಾಬು ಜಗಜೀವನರಾಮ್ ಅವರು ಭಾರತದಲ್ಲಿ ಹಸಿವು ಮತ್ತು ಬಡತನ ತೊಲಗಬೇಕಾದರೆ ಕೃಷಿ ಕ್ಷೇತ್ರ ಅಭಿವೃದ್ಧಿಯಾಗಬೇಕು ಎಂದು ನಂಬಿದ್ದರು. ಅದಕ್ಕಾಗಿ ಸುಧಾರಿತ ಬಿತ್ತನೆ ಬೀಜಗಳು, ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಜೊತೆಗೆ ಸಕಲ ಸವಲತ್ತುಗಳನ್ನೂ ಒದಗಿಸಿ ಭಾರತ ಆಹಾರದಲ್ಲಿ ಸ್ವಾವಂಬಿಯಾಗಲು ಕಾರಣರಾದರು ಎಂದು ತಿಳಿಸಿದರು.

ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಭಾರತದಲ್ಲಿ ದೀರ್ಘಕಾಲದ ವರೆಗೆ ಸಂಸದರಾಗಿ, ವಿವಿಧ ಖಾತೆಗಳ ಸಚಿವರಾಗಿ ಬಡವರು, ಕಾರ್ಮಿಕರು, ದಲಿತರ ಉದ್ಧಾರಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಅವಕಾಶ ವಂಚಿತ ಸಮುದಾಯಗಳಿಗೆ ಹಕ್ಕು ಮತ್ತು ಅವಕಾಶಗಳನ್ನು, ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಬದುಕಿನುದ್ದಕ್ಕೂ ಹೋರಾಡಿದರು ಎಂದು ಅವರು ಬಣ್ಣಿಸಿದರು.

ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್‌ಕುಮಾರ್ ಮಾತನಾಡಿ, ಡಾ.ಬಾಬು ಜಗಜೀವನ ರಾಮ್ ಅವರು ಎಲ್ಲಾ ಹಂತದಲ್ಲಿಯೂ ಜಾತಿಯ ಅವಮಾನವನ್ನು ಅನುಭವಿಸಿದರು. ತಮ್ಮ ವಿದ್ಯಾರ್ಥಿ ದಿಶೆಯಲ್ಲಿಯೇ ಅಪಾರವಾದ ಪಾಂಡಿತ್ಯವನ್ನು ಹೊಂದಿದ್ದ ಅವರು ದೇಶದ ಭವಿಷ್ಯ ಮತ್ತು ಶೋಷಿತ ಸಮುದಾಯಗಳ ಬಿಡುಗಡೆಯ ಬಗ್ಗೆ ನಿಶ್ಚಿತ ನಿಲುವನ್ನು ತಳೆದಿದ್ದರು ಎಂದು ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಗಂಗಾಧರ, ಡಾ.ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಆರ್.ತಿಮ್ಮರಾಯಪ್ಪ, ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಉಪಕುಲಸಚಿವ ಕೆ.ಎನ್.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

3 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

3 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago