ಮೈಸೂರು ನಗರ

ಮೂಲ ಸೌಕರ್ಯ ಸಮಸ್ಯೆ : ಪಾಲಿಕೆ ಆಯುಕ್ತರಿಗೆ ಪತ್ರ ಬರೆದ ಸಂಸದ ಯದುವೀರ್‌

ಮೈಸೂರು : ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ನಗರದ ಪರಿಸ್ಥಿತಿ ಸುಧಾರಿಸಲು ವಾರ್ಡ್‌ವಾರು ಕ್ರಮ ಕೈಗೊಳ್ಳಲಾಗುತ್ತಿದೆ. ನಗರದ ವಾರ್ಡ್ ಸಂಖ್ಯೆ 25ರ ತಿಲಕ್‌ನಗರದಲ್ಲಿ ಸಮಸ್ಯೆಗಳ ಬಗ್ಗೆ ನಾಗರಿಕರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಕುಡಿಯುವ ನೀರು, ಮೂಲ ಸೌಕರ್ಯ, ಸಾರ್ವಜನಿಕ ಸುರಕ್ಷತೆ ಹಾಗೂ ದನಗಳ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ. ಈ ನಿಟ್ಟಿನಲ್ಲಿ ತಿಲಕ್‌ನಗರ ವಾರ್ಡ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗಾಗಲೇ ನಗರಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ಈ ವಾರ್ಡ್‌ನಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದಕ್ಕೆ ತಕ್ಷಣದ ಪರಿಹಾರವಾಗಿ ವಾಣಿವಿಲಾಸ ವಾಟರ್ ವರ್ಕ್ಸ್‌ನಿಂದ ತಿಲಕ್‌ನಗರ ಓವರ್‌ಹೆಡ್ ಟ್ಯಾಂಕ್‌ಗೆ ನೀರಿನ ಪೈಪ್‌ಲೇನ್ ಅನ್ನು ಸಂಪರ್ಕಿಸುವುದು ಮತ್ತು ಈ ಪ್ರದೇಶಕ್ಕೆ ಸಮರ್ಪಕ ಮತ್ತು ನಿಯಮಿತ ನೀರು ಸರಬರಾಜು ಖಚಿತಪಡಿಸಿ ಕೊಳ್ಳಲು ಎಸ್‌ಎಫ್‌ಸಿ ಅನುದಾನವನ್ನು ಬಳಸಿಕೊಂಡು 10 ಲಕ್ಷ ಲೀಟರ್ ಸಾಮರ್ಥ್ಯದ ಸಂಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಸಮುದಾಯ ಭವನ
ತಿಲಕ್ ನಗರದಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಬೇಡಿಕೆ ಇತ್ತು. ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಗಳು ಮತ್ತು ಕಲ್ಯಾಣ ಚಟುವಟಿಕೆಗಳಿಗೆ ಅವಶ್ಯಕವಾಗಿದೆ. ಈ ಕೆಲಸವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ. ಸಾರ್ವಜನಿಕ ಸುರಕ್ಷತೆ ಮತ್ತು ಅಗತ್ಯ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಿಡಾಡಿ ದನಗಳ ಸಮಸ್ಯೆಗೆ ಪರಿಹಾರ
ಈ ವಾರ್ಡ್‌ನಲ್ಲಿ ಮಾಲೀಕರು ತಮ್ಮ ಹಸುಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಮುಕ್ತವಾಗಿ ಬಿಡುತ್ತಿದ್ದಾರೆ ಇದರಿಂದ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಹೀಗಾಗಿ ರಸ್ತೆಯಲ್ಲಿ ದನಗಳನ್ನು ಬಿಡುವವರಿಗೆ ದಂಡ ವಿಽಸಲು ಹಾಗೂ ಕಠಿಣ ಕ್ರಮ ಜರುಗಿಸಲು ಆಯುಕ್ತರಿಗೆ ಆದೇಶಿಸಲಾಗಿದೆ. ಇಡೀ ನಗರದಲ್ಲಿ ಯಾವುದೇ ಸಮಸ್ಯೆ ಇದ್ದರೂ ನಾಗರಿಕರು ಅಹವಾಲು ಮೂಲಕ ತಿಳಿಸಬಹುದು. ಅದನ್ನು ಶೀಘ್ರವಾಗಿ ಬಗೆಹರಿಸಲು ಬದ್ಧವಾಗಿದ್ದೇನೆ ಎಂದು ಭರವಸೆ ನೀಡಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

4 hours ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

4 hours ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

4 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

4 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

5 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

5 hours ago