ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು ಮೈಸೂರು ಭಾಗದಿಂದ ಸ್ವಯಂ ಪ್ರೇರಿತರಾಗಿ ಸಾವಿರಾರು ಮಂದಿ ಭಾಗವಹಿಸಬೇಕು ಎಂದು ಮುಖಂಡ ನಾಗವಾಲ ನರೇಂದ್ರ ಮನವಿ ಮಾಡಿದರು.
ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಮಾ.23 ಮೈಸೂರಿನಲ್ಲಿ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ನಾವೆಲ್ಲರೂ ತಿರಸ್ಕರಿಸಬೇಕು. ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಎಂದು ಹೇಳಿದರು.
ಆದರೆ, ಒಳ ಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆ ಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲುಕುವಂತಾಗಿದೆ ಎಂದರು.
ನಮ್ಮ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ನಾವು ಕೂಡ ಸ್ವಾಭಿಮಾನಿಗಳು. ನಮ್ಮ ನಾಯಕರುಗಳಿಗೆ ಚಪ್ಪಾಲಿಯಲ್ಲಿ ಹೊಡೆಯುವವರ ಪರವಾಗಿ ನಿಲ್ಲಬೇಕಾದ ಅಗತ್ಯ ನಮಗಿಲ್ಲ ಎಂದು ಹೇಳಿದರು.
ಮಾಜಿ ಗ್ರಾಪಂ ಮಾಜಿ ಅಧ್ಯಕ್ಷ ಬೋಗಾದಿ ನಾಗರಾಜ್ ಮಾತನಾಡಿ, ಮಾದಿಗ ಸಮುದಾಯದವರು ನಮ್ಮನ್ನು ಯುದ್ಧಕ್ಕೆ ಕರೆಯುತ್ತಿದ್ದಾರೆ. ರಕ್ತಪಾತವಾಗುತ್ತದೆ ಎಂದು ಭಾಷಣ ಮಾಡುತ್ತಾರೆ. ನಮ್ಮಿಂದಲೇ ಬಾಷಣ ಮಾಡುವುದನ್ನು ಕಲಿತವರಿಗೆ ಹೇಗೆ ಉತ್ತರ ಕೊಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು.
ಸಚಿವ ಹೆಚ್.ಸಿ.ಮಹದೇವಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದವರು ಕೆ.ಎಚ್.ಮುನಿಯಪ್ಪ ಅವರಿಗೆ ಯಾಕೇ ಹೊಡೆಯಲಿಲ್ಲ. ಒಳ ಮೀಸಲಾತಿ ರಾಜಕಾರಣದ ಕುತಂತ್ರ. ಅದನ್ನು ವಿರೋಧಿಸಬೇಕು. ಪ್ರತಿಭಟನೆಯಲ್ಲಿ ಕನಿಷ್ಠ 6 ಲಕ್ಷ ಜನರು ಸೇರಬೇಕು ಎಂದು ಹೇಳಿದರು.
ಸಮಿತಿ ರಚನೆ
ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನಾ ರ‍್ಯಾಲಿ ಯಶಸ್ವಿಯಾಗಬೇಕಾದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಸಮಿತಿಗಳಾಗಬೇಕು. ಪ್ರತೀ ಗ್ರಾಮದಲ್ಲಿಯೂ ಪಂಚಾಯ್ತಿ ಸೇರಿಸಿ ಸಮಾವೇಶದ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.
ಸಂವಿದಾನ ನೀಡಿರುವ ಹಕ್ಕನ್ನು ಬಳಸಿಕೊಂಡು ಉನ್ನತ ಸ್ಥಾಲದಲ್ಲಿ ಇದ್ದ ಹಾಗೂ ಇರುವ ನಮ್ಮ ಸಮುದಾಯದ ಸಾಕಷ್ಟು ಸ್ಥಿತಿವಂತರಿದ್ದಾರೆ. ಅವರುಗಳು ಮೌನವಾಗಿರಬಾರದು. ಸಮಾವೇಶ ಯಶಸ್ಸಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.
ಪ್ರತೀ ತಾಲ್ಲೂಕು ಮಟ್ಟದಿಂದ ಅಂದು ಬಸ್‌ಗಳ ವ್ಯವಸ್ಥೆ ಮಾಡಬೇಕು, ಭಾಗವಹಿಸುವವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಬೇಕು. ಇದಕ್ಕೆ ನಮ್ಮ ಮುಖಂಡರು ಹಾಗೂ ಸ್ವಾಭಿಮಾನಿ ದಲಿತರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ನಂಜುಂಡಸ್ವಾಮಿ, ಅತಿಥಿ ಉಪನ್ಯಾಸಕ ಡಾ. ಪ್ರತಾಪ್, ಬಿಳಿಗೆರೆ ರಾಜಣ್ಣ, ರಮೇಶ್, ಮೂರ್ತಿ, ಭುಗತಹಳ್ಳಿ ಮಣಿಯಯ್ಯ, ಜಿಪಂ ಮಾಜಿ ಸದಸ್ಯ ಚನ್ನಪ್ಪ, ಸೋಮಶೇಖರ್, ಜವರಪ್ಪ, ದಸಂಸ ಸಂಚಾಲಕ ಚೋರನಹಳ್ಳಿ ಶಿವಣ್ಣ, ಬೆಳವಾಡಿ ಶಿವಕುಮಾರ್, ಡಾ.ಎಸ್.ಮೂರ್ತಿ ಕಲ್ಲಹಳ್ಳಿ, ಕಲ್ಲಹಳ್ಳಿ ಕುಮಾರ್ ಮುಂತಾದವರಿದ್ದರು.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…