ಮೈಸೂರು ನಗರ

ಒಳಮೀಸಲಾತಿಯಲ್ಲಿ ಬಲಗೈಗೆ ಅನ್ಯಾಯ : ಮಾ.25ಕ್ಕೆ ಬೆಂಗಳೂರಲ್ಲಿ ಬೃಹತ್‌ ಸಮಾವೇಶ

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು ಮೈಸೂರು ಭಾಗದಿಂದ ಸ್ವಯಂ ಪ್ರೇರಿತರಾಗಿ ಸಾವಿರಾರು ಮಂದಿ ಭಾಗವಹಿಸಬೇಕು ಎಂದು ಮುಖಂಡ ನಾಗವಾಲ ನರೇಂದ್ರ ಮನವಿ ಮಾಡಿದರು.

ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಏರ್ಪಡಿಸಲಾಗಿದ್ದ ಮಾ.23 ಮೈಸೂರಿನಲ್ಲಿ ಮಾ.25 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿಯನ್ನು ನಾವೆಲ್ಲರೂ ತಿರಸ್ಕರಿಸಬೇಕು. ಇಷ್ಟು ದಿವಸ ಹೊಲಯ ಹಾಗೂ ಮಾದಿಗರು ಸಹೋದರರೆಂದು ಭಾವಿಸಿದ್ದೆವು ಎಂದು ಹೇಳಿದರು.

ಆದರೆ, ಒಳ ಮೀಸಲಾತಿ ಹಂಚಿಕೆ ಮುನ್ನೆಲೆಗೆ ಬಂದ ಮೇಲೆ ಅದು ಸುಳ್ಳೆಂಬುದು ಸಾಬೀತಾಗಿದೆ. ಸಮೀಕ್ಷೆ ಯಲ್ಲಿ ಹೊಲೆಯ ಜನಾಂಗದವರು ಸರಿಯಾಗಿ ಪಾಲ್ಗೊಳ್ಳದೇ ವ್ಯತ್ಯಾಸವಾಗಿದೆ. ಪ್ರಾದೇಶಿಕವಾರು ಭಿನ್ನಭಿನ್ನವಾಗಿ ಜಾತಿಯನ್ನು ನಮೂದಿಸಿ ತೊಂದರೆಗೆ ಸಿಲುಕುವಂತಾಗಿದೆ ಎಂದರು.

ನಮ್ಮ ಮಕ್ಕಳ ಭವಿಷ್ಯಕ್ಕೆ ಕಂಟಕವಾಗಿರುವ ಒಳ ಮೀಸಲಾತಿಯನ್ನು ತಿರಸ್ಕರಿಸಬೇಕೆಂಬುದು ನಮ್ಮ ಆಗ್ರಹವಾಗಿದೆ. ನಾವು ಕೂಡ ಸ್ವಾಭಿಮಾನಿಗಳು. ನಮ್ಮ ನಾಯಕರುಗಳಿಗೆ ಚಪ್ಪಾಲಿಯಲ್ಲಿ ಹೊಡೆಯುವವರ ಪರವಾಗಿ ನಿಲ್ಲಬೇಕಾದ ಅಗತ್ಯ ನಮಗಿಲ್ಲ ಎಂದು ಹೇಳಿದರು.

ಮಾಜಿ ಗ್ರಾಪಂ ಮಾಜಿ ಅಧ್ಯಕ್ಷ ಬೋಗಾದಿ ನಾಗರಾಜ್ ಮಾತನಾಡಿ, ಮಾದಿಗ ಸಮುದಾಯದವರು ನಮ್ಮನ್ನು ಯುದ್ಧಕ್ಕೆ ಕರೆಯುತ್ತಿದ್ದಾರೆ. ರಕ್ತಪಾತವಾಗುತ್ತದೆ ಎಂದು ಭಾಷಣ ಮಾಡುತ್ತಾರೆ. ನಮ್ಮಿಂದಲೇ ಬಾಷಣ ಮಾಡುವುದನ್ನು ಕಲಿತವರಿಗೆ ಹೇಗೆ ಉತ್ತರ ಕೊಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು.

ಸಚಿವ ಹೆಚ್.ಸಿ.ಮಹದೇವಪ್ಪ ಅವರ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದವರು ಕೆ.ಎಚ್.ಮುನಿಯಪ್ಪ ಅವರಿಗೆ ಯಾಕೇ ಹೊಡೆಯಲಿಲ್ಲ. ಒಳ ಮೀಸಲಾತಿ ರಾಜಕಾರಣದ ಕುತಂತ್ರ. ಅದನ್ನು ವಿರೋಧಿಸಬೇಕು. ಪ್ರತಿಭಟನೆಯಲ್ಲಿ ಕನಿಷ್ಠ 6 ಲಕ್ಷ ಜನರು ಸೇರಬೇಕು ಎಂದು ಹೇಳಿದರು.

ಸಮಿತಿ ರಚನೆ
ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನಾ ರ‍್ಯಾಲಿ ಯಶಸ್ವಿಯಾಗಬೇಕಾದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಸಮಿತಿಗಳಾಗಬೇಕು. ಪ್ರತೀ ಗ್ರಾಮದಲ್ಲಿಯೂ ಪಂಚಾಯ್ತಿ ಸೇರಿಸಿ ಸಮಾವೇಶದ ಮಹತ್ವದ ಬಗ್ಗೆ ತಿಳಿಸಬೇಕು ಎಂದು ಮುಖಂಡರು ಸಲಹೆ ನೀಡಿದರು.

ಸಂವಿದಾನ ನೀಡಿರುವ ಹಕ್ಕನ್ನು ಬಳಸಿಕೊಂಡು ಉನ್ನತ ಸ್ಥಾಲದಲ್ಲಿ ಇದ್ದ ಹಾಗೂ ಇರುವ ನಮ್ಮ ಸಮುದಾಯದ ಸಾಕಷ್ಟು ಸ್ಥಿತಿವಂತರಿದ್ದಾರೆ. ಅವರುಗಳು ಮೌನವಾಗಿರಬಾರದು. ಸಮಾವೇಶ ಯಶಸ್ಸಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು ಎಂದು ಕರೆ ನೀಡಿದರು.

ಪ್ರತೀ ತಾಲ್ಲೂಕು ಮಟ್ಟದಿಂದ ಅಂದು ಬಸ್‌ಗಳ ವ್ಯವಸ್ಥೆ ಮಾಡಬೇಕು, ಭಾಗವಹಿಸುವವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಬೇಕು. ಇದಕ್ಕೆ ನಮ್ಮ ಮುಖಂಡರು ಹಾಗೂ ಸ್ವಾಭಿಮಾನಿ ದಲಿತರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ನಂಜುಂಡಸ್ವಾಮಿ, ಅತಿಥಿ ಉಪನ್ಯಾಸಕ ಡಾ. ಪ್ರತಾಪ್, ಬಿಳಿಗೆರೆ ರಾಜಣ್ಣ, ರಮೇಶ್, ಮೂರ್ತಿ, ಭುಗತಹಳ್ಳಿ ಮಣಿಯಯ್ಯ, ಜಿಪಂ ಮಾಜಿ ಸದಸ್ಯ ಚನ್ನಪ್ಪ, ಸೋಮಶೇಖರ್, ಜವರಪ್ಪ, ದಸಂಸ ಸಂಚಾಲಕ ಚೋರನಹಳ್ಳಿ ಶಿವಣ್ಣ, ಬೆಳವಾಡಿ ಶಿವಕುಮಾರ್, ಡಾ.ಎಸ್.ಮೂರ್ತಿ ಕಲ್ಲಹಳ್ಳಿ, ಕಲ್ಲಹಳ್ಳಿ ಕುಮಾರ್ ಮುಂತಾದವರಿದ್ದರು.

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago