ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ಯೋಗಕ್ಕೆ ಬಹಳ ಹೆಸರುವಾಸಿಯಾಗಿದೆ.
ಜೂನ್.21ರ ಬೆಳಿಗ್ಗೆ 6 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, 15 ಸಾವಿರ ಯೋಗಪಟುಗಳು ಭಾಗಿಯಾಗಲಿದ್ದಾರೆ. ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಜೂನ್.15ರಂದು ಪೂರ್ವಾಭ್ಯಾಸ ನಡೆಯಲಿದ್ದು, ಇದಕ್ಕೆ ಆಸಕ್ತರು ಭಾಗವಹಿಸಬಹುದು ಎಂದು ಹೇಳಿದರು. ಇದೇ ವೇಳೆ ಯೋಗ ದಿನದ ಪ್ರಚಾರ ಸಾಮಗ್ರಿಯನ್ನು ಅವರು ಬಿಡುಗಡೆ ಮಾಡಿದರು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…