ಮೈಸೂರು ನಗರ

ಇರಾನ್-ಇಸ್ರೇಲ್‌ ಸಂಘರ್ಷ: ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಎಚ್‌ಸಿಎಂ

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾತನಾಡಿ ಕ್ರಮವಹಿಸಿದ್ದಾರೆ. ಈ ಘಟನೆಯಲ್ಲಿ ಮೈಸೂರಿನವರು ಇರುವ ಮಾಹಿತಿ ಇಲ್ಲಿಯವರೆಗೂ ಸಿಕ್ಕಿಲ್ಲ ಎಂದು ಹೇಳಿದರು.

ಇನ್ನು ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸೈಲೆಂಟ್‌ ಆದ ಅವರು, ನಾನು ಯಾರ ಬಗ್ಗೆಯೂ ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಯಾರು ನನ್ನ ಬಗ್ಗೆ ಏನೇ ಹೇಳಿಕೆ ನೀಡಿದರು ಅದರ ಬಗ್ಗೆ ಉತ್ತರ ಕೊಡುವುದಿಲ್ಲ. ಪಕ್ಷದ ವಿಚಾರವನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ವಿಚಾರಗಳು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇನ್ನು ಒಳ ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರವು ಕಾನೂನು ಮುಖಾಂತರವೇ ಎಲ್ಲವು ಸಾಗುತ್ತಿದೆ. ಕೆಲವರು ಪರ- ವಿರೋಧದ ಬಗ್ಗೆ ಮಾತನಾಡುತ್ತಿದ್ದಾರೆ. ಯಾರು ಮಾತನಾಡುತ್ತಾರೋ ಮಾತನಾಡಲಿ ಬಿಡಿ. ಇದು ಪ್ರಜಾಪ್ರಭುತ್ವ, ಎಲ್ಲರಿಗೂ ಮಾತನಾಡುವ ಅವಕಾಶವಿದೆ. ಆದರೆ ಎಲ್ಲವು ಸಂವಿಧಾನದ ಅಡಿಯಲ್ಲಿ ನಡೆಯುತ್ತಿದೆ. ಇದರಲ್ಲಿ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆಯಾದದ್ದನ್ನು ಬಹಿರಂಗಪಡಿಸಬೇಕು ಎಂಬುದೇನೂ ಇಲ್ಲ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago