ಮೈಸೂರು ನಗರ

ಬೆಂಕಿ ಹಚ್ಚಿ ಅದರಲ್ಲಿ ತಾನು ಸುಟ್ಟು ಹೋಗುವುದು ಸರಿಯಲ್ಲ: ಪ್ರತಾಪ್‌ ಸಿಂಹ ವಿರುದ್ಧ ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್‌ ಸೇಠ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ ಇರಲಿ ಬೆಂಕಿ ಹಚ್ಚಿ ತಾನು ಸುಟ್ಟುಹೋಗುವುದು ಸರಿಯಲ್ಲ. ಈ ರೀತಿ ಹೇಳಿಕೆ ಕೊಡುವವರಿಗೆ ತಾಳ್ಮೆ ಇರಬೇಕು. ಭವಿಷ್ಯದಲ್ಲಿ ಒಳ್ಳೆಯದಾಗಬೇಕಾದರೆ ಬೆಂಕಿ ಹಚ್ಚಿ, ಕಾವಿನಲ್ಲಿ ಸುಟ್ಟು ಹೋಗುವುದು ಸರಿಯಲ್ಲ. ಇತಿಹಾಸ ನಮ್ಮ ಮುಂದೆ ಇದೆ. ಎಸ್.ಎಂ.ಕೃಷ್ಣ, ನಿಸಾರ್ ಅಹಮದ್, ರಾಷ್ಟ್ರಪತಿಗಳು, ಸಾಮಾನ್ಯ ರೈತ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಈಗ ದಸರಾದ ಸಂಪೂರ್ಣ ಹೊಣೆಗಾರಿಕೆಯನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ. ವ್ಯಕ್ತಿಯ ಗೌರವ ನೋಡಿ ಆಹ್ವಾನ ಕೊಡಲಾಗಿದೆ. ಸಾಹಿತ್ಯ ಲೋಕದಲ್ಲಿ ಗುರುತಿಸಿ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ನನ್ನಲ್ಲಿರುವ ಭಕ್ತಿ ಯಾರಿಗೂ ತೋರಿಸುವುದಲ್ಲ. ನನ್ನ ನಡತೆಯಷ್ಟೇ ಮುಖ್ಯ. ನಾನು ಮಾಡುವ ಕೆಲಸ ನನಗೆ ತೃಪ್ತಿ ತರಬೇಕು. ಹೇಗಾದರೂ ಮುಂದೆ ಬರಬೇಕು ಎಂದು ಕೆಲವರು ಇಂತಹ ವಿಚಾರ ವಿಚಾರಗಳನ್ನು ಮುನ್ನಲೆಗೆ ತರುತ್ತಾರೆ. ಇದು ಪ್ರಜ್ಞಾವಂತರಿಗೆ ಶೋಭೆ ತರುವುದಿಲ್ಲ. ನಾವೆಲ್ಲರೂ ಸರ್ವಧರ್ಮದ ವ್ಯವಸ್ಥೆಯಲ್ಲಿ ಹೋಗಬೇಕಿದೆ ಎಂದು ಹೇಳಿದರು.

ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಡಿಸಿಎಂ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಎಂದಲ್ಲ. ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಸಿಎಂ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯು ಸರಿ ಇಲ್ಲ. ರಾಜಣ್ಣ ಮಾತನಾಡಿರುವುದನ್ನು ನಾನು ಒಪ್ಪುವುದಿಲ್ಲ. ರಾಜಣ್ಣ ಈ ರೀತಿ ಮಾತಾಡಿ ಮಾತಾಡಿ ತಮಗೆ ತಾವೇ
ನಷ್ಟ ಅನುಭವಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ತನಿಖೆ ಮಾಡಿದ್ದೆ ಸರಿ ತಪ್ಪು ಎನ್ನುವ ಚರ್ಚೆ ಸರಿಯಲ್ಲ.
ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಅಗತ್ಯವಾಗಿ ಮಾಡಬೇಕು. ದೊಡ್ಡ ಧಾರ್ಮಿಕ ಸಂಸ್ಥೆ ಮೇಲೆ ಆರೋಪ ಮಾಡಿ ಯಾರು ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದ್ದೋ ಕೈವಾಡವಿದೆ. ಸಮಾಜಘಾತುಕ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಮಾಜಘಾತುಕ ಕೆಲಸ ಮಾಡುವವರಿಗೆ ಜಾತಿ, ಧರ್ಮ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

1 hour ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

1 hour ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

17 hours ago