political clash can be start anytime
ಮೈಸೂರು: ಲೇಖಕಿ ಬಾನು ಮುಷ್ತಾಕ್ ಅವರು ಈ ಬಾರಿಯ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಂಸದ ಪ್ರತಾಪ್ ಸಿಂಹ ನಡೆಗೆ ಶಾಸಕ ತನ್ವೀರ್ ಸೇಠ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಳ್ಮೆ ಇರಲಿ ಬೆಂಕಿ ಹಚ್ಚಿ ತಾನು ಸುಟ್ಟುಹೋಗುವುದು ಸರಿಯಲ್ಲ. ಈ ರೀತಿ ಹೇಳಿಕೆ ಕೊಡುವವರಿಗೆ ತಾಳ್ಮೆ ಇರಬೇಕು. ಭವಿಷ್ಯದಲ್ಲಿ ಒಳ್ಳೆಯದಾಗಬೇಕಾದರೆ ಬೆಂಕಿ ಹಚ್ಚಿ, ಕಾವಿನಲ್ಲಿ ಸುಟ್ಟು ಹೋಗುವುದು ಸರಿಯಲ್ಲ. ಇತಿಹಾಸ ನಮ್ಮ ಮುಂದೆ ಇದೆ. ಎಸ್.ಎಂ.ಕೃಷ್ಣ, ನಿಸಾರ್ ಅಹಮದ್, ರಾಷ್ಟ್ರಪತಿಗಳು, ಸಾಮಾನ್ಯ ರೈತ ಕೂಡ ದಸರಾ ಉದ್ಘಾಟನೆ ಮಾಡಿದ್ದಾರೆ. ಈಗ ದಸರಾದ ಸಂಪೂರ್ಣ ಹೊಣೆಗಾರಿಕೆಯನ್ನು ಸರ್ಕಾರ ನಡೆಸಿಕೊಂಡು ಬರುತ್ತಿದೆ. ವ್ಯಕ್ತಿಯ ಗೌರವ ನೋಡಿ ಆಹ್ವಾನ ಕೊಡಲಾಗಿದೆ. ಸಾಹಿತ್ಯ ಲೋಕದಲ್ಲಿ ಗುರುತಿಸಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ನನ್ನಲ್ಲಿರುವ ಭಕ್ತಿ ಯಾರಿಗೂ ತೋರಿಸುವುದಲ್ಲ. ನನ್ನ ನಡತೆಯಷ್ಟೇ ಮುಖ್ಯ. ನಾನು ಮಾಡುವ ಕೆಲಸ ನನಗೆ ತೃಪ್ತಿ ತರಬೇಕು. ಹೇಗಾದರೂ ಮುಂದೆ ಬರಬೇಕು ಎಂದು ಕೆಲವರು ಇಂತಹ ವಿಚಾರ ವಿಚಾರಗಳನ್ನು ಮುನ್ನಲೆಗೆ ತರುತ್ತಾರೆ. ಇದು ಪ್ರಜ್ಞಾವಂತರಿಗೆ ಶೋಭೆ ತರುವುದಿಲ್ಲ. ನಾವೆಲ್ಲರೂ ಸರ್ವಧರ್ಮದ ವ್ಯವಸ್ಥೆಯಲ್ಲಿ ಹೋಗಬೇಕಿದೆ ಎಂದು ಹೇಳಿದರು.
ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜಕೀಯ ಪಕ್ಷದ ಸಿದ್ಧಾಂತ ಅರ್ಥ ಮಾಡಿಕೊಂಡರೆ ಅದರಲ್ಲಿ ತಪ್ಪೇನಿದೆ? ಡಿಸಿಎಂ ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದರೆ ಅದರ ಅರ್ಥ ಅವರು ಬಿಜೆಪಿ ಪರ ಎಂದಲ್ಲ. ಯಾರು ಕೂಡ ತಮ್ಮ ಪಕ್ಷದ ಸಿದ್ಧಾಂತವನ್ನು ಬಲಿ ಕೊಡಲ್ಲ. ಡಿಸಿಎಂ ಬಗ್ಗೆ ರಾಜಣ್ಣ ಮಾಡಿರುವ ಟೀಕೆಯು ಸರಿ ಇಲ್ಲ. ರಾಜಣ್ಣ ಮಾತನಾಡಿರುವುದನ್ನು ನಾನು ಒಪ್ಪುವುದಿಲ್ಲ. ರಾಜಣ್ಣ ಈ ರೀತಿ ಮಾತಾಡಿ ಮಾತಾಡಿ ತಮಗೆ ತಾವೇ
ನಷ್ಟ ಅನುಭವಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಯಾರು ಮಾಡಬಾರದು. ತನಿಖೆ ಮಾಡಿದ್ದೆ ಸರಿ ತಪ್ಪು ಎನ್ನುವ ಚರ್ಚೆ ಸರಿಯಲ್ಲ.
ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಅಗತ್ಯವಾಗಿ ಮಾಡಬೇಕು. ದೊಡ್ಡ ಧಾರ್ಮಿಕ ಸಂಸ್ಥೆ ಮೇಲೆ ಆರೋಪ ಮಾಡಿ ಯಾರು ದೊಡ್ಡವರಾಗಲ್ಲ. ಈ ಪ್ರಕರಣದ ಹಿಂದೆ ಯಾರದ್ದೋ ಕೈವಾಡವಿದೆ. ಸಮಾಜಘಾತುಕ ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಮಾಜಘಾತುಕ ಕೆಲಸ ಮಾಡುವವರಿಗೆ ಜಾತಿ, ಧರ್ಮ ಇರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…