ಮೈಸೂರು ನಗರ

ಸೋಫಿಯ ಖುರೇಷಿ ಅವರನ್ನು ಅವಮಾನಿಸಿದ ಸಚಿವನನ್ನು ಜೈಲಿಗಟ್ಟಿ : ಲಕ್ಷ್ಮಣ್‌ ಆಗ್ರಹ

ಮೈಸೂರು : ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ಕುನ್ವರ್‌ ವಿಜಯ ಶಾ ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದರು.

ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೇನೆಯಲ್ಲಿ ಜಾತಿ ಧರ್ಮ ಎಂಬುದಿಲ್ಲ. ಆದರೆ, ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ ವಿಜಯ್ ಶಾ ಧರ್ಮಧಾರಿತವಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

ಸೋಫಿಯ ಖುರೇಶಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಖುರೇಶಿ ಟೆರರಿಸ್ಟ್ ತಂಗಿ ಎಂದು ಕರೆದಿದ್ದಾರೆ. ಇದನ್ನು ಇಲ್ಲಿಯವರೆಗೆ ಬಿಜೆಪಿಯ ಯಾವ ನಾಯಕರು ಖಂಡನೆ ಮಾಡಿಲ್ಲ. ಇದು ಬಿಜೆಪಿ ಸರ್ಕಾರದ ಹೇಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಳತೆ ಮಾಡುತ್ತಿದೆ. ಇದೇ ಹೇಳಿಕೆ ವಿರೋಧ ಪಕ್ಷಗಳು ಮಾತನಾಡಿದ್ರೆ ಬೆಂಕಿ ಹೊತ್ತಿಸಿಬಿಡುತ್ತಿದ್ದರು. ಈ ಕೂಡಲೇ ಆತನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago