ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 ಉಪ ಸಮಿತಿಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಲಿದೆ. ಜಂಬೂಸವಾರಿ ದಿನ ಸೀಟಿನ ಸಂಖ್ಯೆ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದ್ದು, ನಾಲ್ಕು ನೂರು ಮೀಟರ್ ಹೆಚ್ಚಾದರೆ ಹದಿನೈದು ಸಾವಿರ ಸೀಟು ಜಾಸ್ತಿಯಾಗುತ್ತದೆ. ವೈಮಾನಿಕ ಪ್ರದರ್ಶನ ಬಗ್ಗೆ ಸಿಎಂ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.
ಇನ್ನು ಕಂಜನ್ ಹಾಗೂ ಧನಂಜಯ ಆನೆಗಳ ಕಾದಾಟದ ಬಗ್ಗೆ ಮಾತನಾಡಿದ ಅವರು, ಈ ಘಟನೆಯಿಂದ ಗಾಬರಿಪಡುವ ಅಗತ್ಯ ಇಲ್ಲ. ಆನೆಗಳನ್ನು ಮಾವುತ ಕಂಟ್ರೋಲ್ ಮಾಡಿದ್ದಾನೆ. ಅವುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕಿದೆ. ಅವು ಚೆನ್ನಾಗಿಯೇ ಇದ್ದು ಸಾಕಿದವರನನು ತಿವಿಯಲಿದೆ. ಹಾಗಾಗಿ ಮಾವುತರು ಆನೆಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…