ಮೈಸೂರು ನಗರ

ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ

ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಚಾಲನೆ ನೀಡಿದರು.

ಮೊದಲಿಗೆ ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.

ಆ ಬಳಿಕ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಚಾಲನೆ ನೀಡಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್‌ಸಿ ಸಿ.ಟಿ.ರವಿ, ಮಾಜಿ ಸಚಿವರುಗಳು ಸೇರಿದಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕಿಡಿಕಾರಿದ ಬಿಜೆಪಿ ನಾಯಕರು, ಈ ಸರ್ಕಾರ ರೈತ ವಿರೋಧಿ ಹಾಗೂ ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಈ ಜನಾಕ್ರೋಶ ಯಾತ್ರೆ ಮೇ.3ರವರೆಗೂ ನಡೆಯಲಿದ್ದು, ರಾಜ್ಯ ಸರ್ಕಾರಕ್ಕೆ ಬಿಜೆಪಿ ನಾಯಕರು ಚುರುಕು ಮುಟ್ಟಿಸುವ ಕೆಲಸ ಮಾಡಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

34 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago