ಮೈಸೂರು ನಗರ

ಜನಸ್ಪಂದ ಕಾರ್ಯಕ್ರಮ: 112 ಅರ್ಜಿ ಸ್ವೀಕಾರ

ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌ಸಿ ಮಹದೇವಪ್ಪ ಅವರ  ನೇತೃತ್ವದಲ್ಲಿ  ನಡೆದ ಜನಸ್ಪಂದನ ಕಾರ್ಯಕ್ರಮ ಒಟ್ಟು 112 ಸ್ವೀಕಾರವಾಗಿವೆ.

ಅದರಲ್ಲಿ ಕುಡಿಯುವ ನೀರಿನ ಕೊರತೆ, ಕಟ್ಟಡ ಮತ್ತು ವಸತಿ ಸಮಸ್ಯೆ, ಜಮೀನಿನ ಸಮಸ್ಯೆ ಸೇರಿದಂತೆ  ಇನ್ನೂ ಮುಂತಾದ ಹಲವು ಸಮಸ್ಯೆಗಳ ಹೊತ್ತು ಸಾರ್ವಜನಿಕರು ಸಚಿವರನ್ನು ಭೇಟಿಯಾದರು.

ಬಳಿಕ ಮಾತನಾಡಿದ ಸಚಿವರು ಅಧಿಕಾರಿಗಳ ಜೊತೆ ಸೇರಿ ಚರ್ಚಿಸಿ ಶೀಘ್ರವಾಗಿ ಪರಿಹರಿಸಲಾಗುವುದು. ಮುಂಬರುವ ದಿನಗಳಲ್ಲಿ  ಮತ್ತೊಮ್ಮೆ ಸಾರ್ವಜನಿಕರ ಸಮಸ್ಯೆಗಳಿಗೆ  2-3 ಗಂಟೆಗಳ ಕಾಲ ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೆ ಸಂದರ್ಭದಲ್ಲಿ ತುಳಸಿ ಶಕ್ತಿ ನಗರದ ಮಹಿಳಾ ಸಮಾಜದಲ್ಲಿ ಕಾರ್ಯನಿರ್ವಹಿಸುವ ಬಡ ಮಹಿಳೆಯರಿಗೋಸ್ಕರ, ಅವರ ಆರ್ಥಿಕ ಮತ್ತು ಸಾಮಾಜಿಕ ಹಿತ ದೃಷ್ಠಿಯಿಂದ ಸರ್ಕಾರದ ವತಿಯಿಂದ ರೂ.5 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ವಿಕಲಚೇತನರೊಬ್ಬರ ಕುಟುಂಬದವರೆಲ್ಲರೂ ಅಂಧರಾಗಿದ್ದು ಅವರ ನಿವೇಶನವು ನಾಲ್ಕನೇ ಮಹಡಿಯಲ್ಲಿದ್ದು ಅದನ್ನು ಬದಲಾಯಿಸುವ ಕುರಿತು ಸಲ್ಲಿಸಿದ ಮನವಿಗೆ ಶೀಘ್ರವಾಗಿ ಬದಲಾವಣೆಯನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು.  ಮಹಿಳೆಯೊಬ್ಬಳಿಗೆ ಕೈ ಮತ್ತು ಕಾಲು ಇಲ್ಲದ ಕಾರಣ ಆಕೆಯ ಮುಂದಿನ ಜೀವನವನ್ನು ಸಾಗಿಸಲು ಅಂಗಡಿಯ ವ್ಯವಸ್ಥೆಯನ್ನು ಮಾಡಿಕೊಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago