ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ ಸಮಾವೇಶವು ರಣೋತ್ಸಾಹ ಮೂಡಿಸುವ ಜೊತೆಗೆ, ನಿಷ್ಠಾವಂತ ಮುಖಂಡರ, ಕಾರ್ಯಕರ್ತರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಶಾಸಕ ಜಿ.ಟಿ.ದೇವೇಗೌಡರ ಅನುಪಸ್ಥಿತಿಯಲ್ಲಿ ಭಾನುವಾರ ನಗರದ ಬೋಗಾದಿ ರಿಂಗ್ ರಸ್ತೆಯ ನಾಗಲಿಂಗೇಶ್ವರ-ಬೋಗೇಶ್ವರ ದೇವಸ್ಥಾನದ ಎದುರಿನ ಬ್ಯಾಂಕರ್ಸ್ ಲೇಔಟ್‌ನಲ್ಲಿರುವ ಬೃಹತ್ ಮೈದಾನದಲ್ಲಿ ನಡೆದ ಸಮಾವೇಶ ಅಭೂತಪೂರ್ವವಾಗಿ ನಡೆುುಂವ ಮೂಲಕ ಕ್ಷೇತ್ರದ ಕಾರ್ಯಕರ್ತರು, ಮುಖಂಡರೊಂದಿಗೆ ನಾವಿದ್ದೇವೆ. ಯಾವುದಕ್ಕೂ ಹೆದರಬೇಡಿ ಎನ್ನುವ ಸಂದೇಶವನ್ನು ಕೊಡಲಾಯಿತು.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ ಮಾತನಾಡುತ್ತಿರುವ ರಾಜ್ಯದ ಕಾಂಗ್ರೆಸ್ ನಾಯಕರು ಮೂರು ವರ್ಷಗಳಲ್ಲಿ ವಿದ್ಯುತ್, ಮದ್ಯ, ಬಸ್, ಆಸ್ತಿ ನೋಂದಣಿ ತೆರಿಗೆ ಸೇರಿದಂತೆ ಇನ್ನಿತರ ವಸ್ತುಗಳ ಬೆಲೆ ಹೆಚ್ಚಳದ ಬಗ್ಗೆ ಪಟ್ಟಿ ತೆಗೆಯಲಿ ಎಂದು ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ಬಯಕೆಯನ್ನು ನಾಡಿನ ಜನರು ಹೊಂದಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಈ ಕೆಲಸ ಆರಂಭವಾಗಲಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿಳಿಸಿದರು.
ರಾಜ್ಯದಲ್ಲಿ 2028ಕ್ಕೆ ಜಾ.ದಳ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ದ. ಚಾಮುಂಡೇಶ್ವರಿ ದೇವಿಯ ಆಶೀರ್ವಾದದಿಂದ ಎಚ್.ಡಿ. ಕುವಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ. ರೈತರ ಸಾಲಮನ್ನಾ, ಸಾರಾಯಿ ನಿಷೇಧ ಮಾಡಿದ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದರೆ ರಾಜ್ಯಕ್ಕೆ ಒಳಿತಾಗಲಿದೆ ಎನ್ನುವ ಭಾವನೆ ಬಂದಿದೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ತಿಳಿಸಿದರು.
ಮುಂದಿನ ಚುನಾವಣೆಯಲ್ಲಿ ಜಾದಳ-ಬಿಜೆಪಿ ಮೈತ್ರಿ ಸರ್ಕಾರವನ್ನು ಅಧಿಕಾರಕ್ಕೇರುವ ತನಕ ವಿರಮಿಸುವುದಿಲ್ಲ. ಎರಡಂಕಿ ದಾಟಲ್ಲವೆಂದು ಹೇಳಿರುವ ಜಿಲ್ಲೆಯ ನಾಯಕರ ಸವಾಲವನ್ನು ಸ್ವೀಕರಿಸಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿ ಅಧಿಕಾರಕ್ಕೆ ತರಲಾಗುವುದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…