Mysore
33
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಮೈಸೂರು | ನಾಳೆ(ಜುಲೈ.4) ಜನತಾ ದರ್ಶನ

hc mahadevappa

ಮೈಸೂರು : ಸಾರ್ವಜನಿಕರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ದೇಶನದಂತೆ, ಇದೀಗ ಜುಲೈ 4 ರಂದು ಜುಲೈ ತಿಂಗಳ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜನತಾ ದರ್ಶನದಲ್ಲಿ ಭಾಗವಹಿಸಿ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!