ಮೈಸೂರು ನಗರ

ಜನೋಪಕಾರಿಯಾಗಿವೆ ಜನೌಷಧಿ ಕೇಂದ್ರಗಳು: ಯದುವೀರ್‌ ಒಡೆಯರ್‌

ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ.

ನಗರದ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಯದುವೀರ್‌ ಒಡೆಯರ್‌ ಭಾಷಣ ಮಾಡಿದರು.

ಬಡ, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿ ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು.

ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ ಮಳಿಗೆಗಳಲ್ಲಿ ಬಿಪಿ, ಷುಗರ್‌, ಅಸಿಡಿಟಿ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧ ಲಭ್ಯವಾಗುತ್ತಿದೆ. ಇತ್ತೀಚೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ಸಿಗುತ್ತಿದೆ ಎಂದು ಸಂಸದರು ತಿಳಿಸಿದರು.

ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳಿಗೆ ನೂತನ ಸ್ಪರ್ಶ ನೀಡಿದರು. ಈಗ ಲಕ್ಷಾಂತರ ಜನೌಷಧಿ ಕೇಂದ್ರಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ನಮ್ಮ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾಳಜಿಗಳಿಗೆ ಇದು ಸಾಕ್ಷಿಯಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಮಡಿಕೇರಿಯಲ್ಲಿಯೂ ಜನೌಷಧಿ ಕೇಂದ್ರ ದಿನಾಚರಣೆ:

ಶುಕ್ರವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದ ಯದುವೀರ್‌ ಒಡೆಯರ್‌, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಜನೌಷಧಿ ಕೇಂದ್ರಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಜನಪರ ಹಾಗೂ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸದಾ ಮುಂದಾಗಿದೆ. ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚು ಜನೌಷಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

2 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

2 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

6 hours ago