ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ತಿಳಿಸಿದ್ದಾರೆ.
ನಗರದ ಕೆ.ಆರ್. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಯದುವೀರ್ ಒಡೆಯರ್ ಭಾಷಣ ಮಾಡಿದರು.
ಬಡ, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ತಿಳಿಸಿದರು.
ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿ ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು.
ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ ಮಳಿಗೆಗಳಲ್ಲಿ ಬಿಪಿ, ಷುಗರ್, ಅಸಿಡಿಟಿ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧ ಲಭ್ಯವಾಗುತ್ತಿದೆ. ಇತ್ತೀಚೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ಸಿಗುತ್ತಿದೆ ಎಂದು ಸಂಸದರು ತಿಳಿಸಿದರು.
ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳಿಗೆ ನೂತನ ಸ್ಪರ್ಶ ನೀಡಿದರು. ಈಗ ಲಕ್ಷಾಂತರ ಜನೌಷಧಿ ಕೇಂದ್ರಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ನಮ್ಮ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾಳಜಿಗಳಿಗೆ ಇದು ಸಾಕ್ಷಿಯಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದರು.
ಮಡಿಕೇರಿಯಲ್ಲಿಯೂ ಜನೌಷಧಿ ಕೇಂದ್ರ ದಿನಾಚರಣೆ:
ಶುಕ್ರವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದ ಯದುವೀರ್ ಒಡೆಯರ್, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರ ದಿನಾಚರಣೆಯಲ್ಲಿ ಪಾಲ್ಗೊಂಡರು.
ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಜನೌಷಧಿ ಕೇಂದ್ರಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಜನಪರ ಹಾಗೂ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸದಾ ಮುಂದಾಗಿದೆ. ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚು ಜನೌಷಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…