jayaprakash hegde mysuru siddaramaiah
ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ ಆಯೋಗ ನೀಡಿರುವ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಈ ವರದಿ ತಯಾರಿಸಿದೆ. ಈ ಜಾತಿ ಗಣತಿ ವರದಿ ಶೇ.95ರಷ್ಟು ಸತ್ಯಾಂಶದಿಂದ ಕೂಡಿದೆ. ಆದರೆ, ಇದನ್ನು ಕೇವಲ ರಾಜಕೀಯ ಕಾರಣಗಳಿಗಾಗಿ ಮಾತ್ರ ಕೆಲವು ಮೇಲ್ವರ್ಗದವರು ವಿರೋಧಿಸುತ್ತಿದ್ದಾರೆಯೇ ಹೊರತು ಬೇರಾವ ಕಾರಣವೂ ಇಲ್ಲ ಎಂದು ಕಿಡಿಕಾರಿದರು.
ಒಂದು ವೇಳೆ ಈ ಜಾತಿ ಗಣತಿಯ ವರದಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಅದನ್ನು ಬಿಟ್ಟು ಅನಾವಶ್ಯಕವಾಗಿ ಜಾತಿ ಜಾತಿ ಎಂದು ಬೇರೆ ಧರ್ಮದವರ, ಬೇರೆ ಜಾತಿಯವರ ಬಗ್ಗೆ ಕೀಳಾಗಿ ಕಾಣಬೇಡಿ. ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಲಿಂಗಾಯತ, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗುವುದು ಬೇಡವೇ? ಎಂದು ಪ್ರಶ್ನಿಸಿದರು.
ಜಾತಿ ಗಣತಿಗೆ ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಈಗ ಹೇಳುವ ನಿಖಿಲ್ ಕುಮಾರಸ್ವಾಮಿ ಅವರು ಈ ವಿಷಯವನ್ನು ಆಗಲೇ ಯಾಕೆ ಸಂಬಂಧಪಟ್ಟವರನ್ನು ಪ್ರಶ್ನೆ ಮಾಡಲಿಲ್ಲ. ಈಗ ನಮ್ಮ ಮನೆಗೆ ಬಂದಿಲ್ಲ ಎಂದು ವಿರೋಧ ಮಾಡುವಿರಾದರೆ ಖಂಡಿತಾ ನೀವು ಶಾಸಕರಾಗಲು ಅನರ್ಹರರು ಎಂದು ಕಿಡಿಕಾರಿದರು.
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್ ಮಾತನಾಡಿದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಎನ್.ಎಸ್.ಪ್ರಕಾಶ್, ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಕೇಶವ್ ವಿಜಿ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಹೊರಳ ವಾಡಿ ನಂಜುಂಡಸ್ವಾಮಿ, ಬಂಗವಾದಿ ನಾರಾಯಣಪ್ಪ, ಹಿಂದುಳಿದ ವರ್ಗಗಳ ಮುಖಂಡರರಾದ ಲೋಕೇಶ್ ಕುಮಾರ್ ಮಾದಾಪುರ, ಪರಿಶಿಷ್ಟ ಪಂಗಡಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಶಿಂಷಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…