ಮೈಸೂರು ನಗರ

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 38 ಗುಂಟೆ ಭೂಮಿಯನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಈ ಭೂಮಿ ಮೈಸೂರು ಗ್ರಾಮದ ಸರ್ವೇ ನಂ. 87ರಲ್ಲಿ ಇದ್ದು, 0.38 ಎಕರೆ ಪ್ರದೇಶವನ್ನು ಒಳಗೊಂಡಿದೆ. 2010ರಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ (ಜ್ಞಾಪನ ಸಂಖ್ಯೆ: LND(1)CR: 280/2009-10, ದಿನಾಂಕ: 30.08.2010) ಇದನ್ನು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮೆಟ್ರಿಕ್ ನಂತರದ ಬಾಲಕಿಯರ/ಬಾಲಕರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ ಕಾಯ್ದಿರಿಸಲಾಗಿತ್ತು. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಇದನ್ನು ಅನಧಿಕೃತವಾಗಿ ಖಾಸಗಿ ವಾಹನಗಳ ಪಾರ್ಕಿಂಗ್ ಮತ್ತು ಟೀ ಅಂಗಡಿಗಾಗಿ ಬಳಸಿಕೊಂಡಿದ್ದರು. ಪ್ರತಿದಿನ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿ ಹಣ ಗಳಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಒತ್ತುವರಿ ತೆರವುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಫೆಬ್ರವರಿ 6 ರಂದು ತಹಶೀಲ್ದಾರ್ ಮಹೇಶ್ ಕುಮಾರ್ ಹಾಗೂ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಜೆಸಿಬಿ ಸಹಾಯದಿಂದ ಒತ್ತುವರಿ ತೆರವು ಮಾಡಿದರು. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯುವ ಮೂಲಕ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಮಾರ್ಗ ಸುಗಮಗೊಳಿಸಲಾಗಿದೆ.

ಕಾರ್ಯಾಚರಣೆಯ ಸಂದರ್ಭದಲ್ಲಿ ನಗರ ಮಾಪನ ಇಲಾಖೆಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ಅರಕ್ಷಕ ನಿರೀಕ್ಷಕ ಯೋಗಾಂಜನಪ್ಪ, ರವಿಶಂಕರ್ ಮತ್ತು ರೋಹಿತ್ ಅವರು ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

6 hours ago