ಮೈಸೂರು ನಗರ

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ ಮುಂದಾಗಿರುವ ಹೊತ್ತಲ್ಲೇ ಲಕ್ಷಾಂತರ ರೂಪಾಯಿ ಬೆಲೆಬಾಳುವ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡವನ್ನು ಪ್ರಾಧಿಕಾರದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ)ಕ್ಕೆ ಸೇರಿದ ಲಕ್ಷಾಂತರ ರೂ. ಬೆಲೆಬಾಳುವ ಸಿಎ (ನಾಗರಿಕ ಸೌಲಭ್ಯ) ನಿವೇಶನವನ್ನು ರಕ್ಷಿಸುವ ಮೂಲಕ ಭೂಗಳ್ಳರ ಪಾಲಾಗದಂತೆ ನೋಡಿಕೊಂಡಿದ್ದಾರೆ. ಎಂಡಿಎ ಆಯುಕ್ತ ಕೆ.ಆರ್.ರಕ್ಷಿತ್ ಅವರ ಸೂಚನೆ ಮೇರೆಗೆ ಕಾರ್ಯದರ್ಶಿ ಜಾನ್ಸನ್, ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳಾದ ಮಂಜುನಾಥ್, ಮೋಹನ್ ಕುಮಾರ್, ಸಂಪತ್ ಕುಮಾರ್, ನಗರ ಯೋಜಕ ಶಾಖೆಯ ಸಹಾಯಕ ನಿರ್ದೇಶಕ ಶ್ರೀಧರ್, ಕಿರಿಯ ಇಂಜಿನಿಯರ್ ಜಿ. ರಾಜಶೇಖರ್, ಭೂಮಾಪಕ ಹನುಮೇಗೌಡ ಹಾಗೂ ಸಿಬ್ಬಂದಿ ಬುಧವಾರ ಮುಂಜಾನೆ ೫.೪೫ ರಿಂದ ಬೆಳಿಗ್ಗೆ ೮ ಗಂಟೆವರೆಗೆ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಿದರು.

ಈ ಸಂಬಂಧ ಜನವರಿ ೨೭ ರಂದು ಅಧಿಕೃತ ಜ್ಞಾಪನ ಹೊರಡಿಸಿರುವ ಎಂಡಿಎ ಕಾರ್ಯದರ್ಶಿಯವರು ಮೈಸೂರು ತಾಲ್ಲೂಕು, ವರುಣಾ ಹೋಬಳಿ, ವಾಜಮಂಗಲ ಗ್ರಾಮದ ಸರ್ವೇ ನಂ.೩೦/೧ ರಲ್ಲಿ ೬ ಗುಂಟೆ, ೩೦/೨ ರಲ್ಲಿ ೩೧ ಗುಂಟೆ ಮತ್ತು ೩೦/೬ ರಲ್ಲಿ ೩೭ ಗುಂಟೆ ಸೇರಿ ಒಟ್ಟು ೧.೩೪ ಎಕರೆ ಪ್ರದೇಶಕ್ಕೆ ೨೦೧೯ರ ಜುಲೈ ೪ ರಂದು ವಸತಿ ಬಡಾವಣೆ ವಿನ್ಯಾಸ ನಕ್ಷೆಗೆ ಅಂತಿಮ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಅನುಮೋದಿತ ನಕ್ಷೆಯಲ್ಲಿ ನಾಗರಿಕ ಸೌಕರ್ಯ ನಿವೇಶನಕ್ಕಾಗಿ ೩೭೮.೧೮ ಚದರ ಮೀಟರ್ ಜಾಗವನ್ನು ಕಾಯ್ದಿರಿಸಲಾಗಿದೆ. ಆ ನಿವೇಶನವು ಪ್ರಾಧಿಕಾರದ ಆಸ್ತಿಯಾಗಿದ್ದು ಸುಮಾರು ೮೦ ರಿಂದ ೯೦ ಲಕ್ಷ ರೂ ಬೆಲೆಬಾಳುತ್ತದೆ. ಪ್ರಾಧಿಕಾರಕ್ಕೆ ಸೇರಿದ ಈ ಸಿಎ ನಿವೇಶನದಲ್ಲಿ ಪಿ.ಸಿ.ರಾಘವೇಂದ್ರ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್‌ನವರು ಅನಧಿಕೃತವಾಗಿ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡುತ್ತಿರುವುದರಿಂದ ಜನವರಿ ೨೮ ರಂದು ತೆರವುಗೊಳಿಸಬೇಕೆಂದು ಅಧಿಕೃತ ಜ್ಞಾಪನದಲ್ಲಿ ಸೂಚಿಸಿದ್ದರು.

ಅದರಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಿರ್ಮಾಣ ಹಂತದಲ್ಲಿದ್ದ ಕಟ್ಟಡವನ್ನು ತೆರವುಗೊಳಿಸಿ ಸ್ಥಳದಲ್ಲಿ ಎಂಡಿಎ ಸಿಎ ನಿವೇಶನವೆಂದು ನಾಮಫಲಕ ಅಳವಡಿಸಿದರು. ಈ ವೇಳೆ ಮಾಲೀಕರು ಹಾಗೂ ಅವರ ಕಡೆಯವರು ಪ್ರತಿರೋಧ ತೋರಬಹುದೆಂದು ಆಲನಹಳ್ಳಿ ಹಾಗೂ ಉದಯಗಿರಿ ಠಾಣೆ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು.

ಆಸ್ತಿ ರಕ್ಷಣೆಗೆ ಕಾರ್ಯಪಡೆ
ಎಂಡಿಎ ಆಸ್ತಿಗಳನ್ನು ಅತಿಕ್ರಮ ಪ್ರವೇಶ ಮಾಡಿ ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿರುವ ಕಾರಣ ಆಸ್ತಿಗಳನ್ನು ರಕ್ಷಿಸುವ ಸಲುವಾಗಿಯೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಿ ಆದೇಶ ಹೊರಡಿಸಿದ್ದರು.

ಎಕ್ಸಿಕ್ಯೂಟಿವ್ ಇಂಜಿನಿಯರ್ ಎಂ.ಎಸ್. ಮಹೇಶ್ ಮೇಲುಸ್ತುವಾರಿಯಲ್ಲಿ ವಿಶೇಷ ತಹಸಿಲ್ದಾರ್‌ಗಳಾದ ಕೆ.ವಿ. ರಾಜಶೇಖರ್, ರವಿಪ್ರಸಾದ್, ಎನ್.ಎಸ್. ನರಗುಂದ, ಕಾರ್ಯಪಾಲಕ ಅಭಿಯಂತರ ಎ. ನಾಗೇಶ್, ವ್ಯವಸ್ಥಾಪಕರಾದ ಬಿ.ಎಂ. ಶೃತಿ ಸಿಬ್ಬಂದಿಗಳಾದ ಟಿ. ಮಂಜುನಾಥ್, ಪಿ. ರಘು, ಪಿ.ಎಂ. ಸಚಿನ್, ಎಸ್. ಗಂಗಾಧರ್, ಮಹದೇವಸ್ವಾಮಿ, ಕೆಂಪಣ್ಣ, ಕೆ.ಸಿ. ಉಮೇಶ್ ಅವರನ್ನೊಳಗೊಂಡ ಮೂರು ತಂಡಗಳನ್ನು ರಚಿಸಲಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

3 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

3 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

3 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

3 hours ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

3 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

3 hours ago