ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದಸರಾದಲ್ಲಿ ಸಿಎಂ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು ಭೇಟಿ ಮಾಡಿಲ್ಲ. ಅವರು ನನ್ನನ್ನು ಪಕ್ಷಕ್ಕೆ ಬಾ ಎಂದು ಆಹ್ವಾನಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.
ಯಾವುದೋ ಒಂದು ಸಭೆಯಲ್ಲಿ ಹೇಳಿರಬಹುದು. ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಸಾರ್ವತ್ರಿಕ ಚುನಾವಣೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಆಪ್ತ ಕಾರ್ಯದರ್ಶಿ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದರು. ಆಗಲೇ ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಿಲ್ಲ ಎಂದರು.
ಇನ್ನು ಶಾಸಕ ಜಿ.ಟಿ.ದೇವೇಗೌಡರು ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಇದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಜಿಟಿಡಿಯನ್ನು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರವಿಡಲಾಗಿತ್ತು. ಇದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಳಿಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು.
ಈ ಬಗ್ಗೆ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದು, ಸಿಎಂ ಸಿದ್ದರಾಮಯ್ಯರಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…