cm joint dinner
ಮೈಸೂರು: ಸಿಎಂ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಪೌರಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ಸಮುದಾಯಗಳೊಂದಿಗೆ ಸಹಪಂಕ್ತಿ ಭೋಜನ ನಡೆಯಿತು.
ನಗರದ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತಿಗಳು, ಪ್ರಗತಿಪರ ಚಿಂತಕರು, ಅಲ್ಪಸಂಖ್ಯಾತ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದೇ ವೇಳೆ ಪೌರಕಾರ್ಮಿಕ ಮಹಿಳೆಯರಿಗೆ ಸೀರೆಯನ್ನು ವಿತರಿಸಲಾಯಿತು.
ಅನ್ನ, ಸಾಂಬಾರು, ತಿಳಿಸಾರು, ಒಬ್ಬಟ್ಟು, ಪಾಯಸ, ಪಲ್ಯ, ಬಜ್ಜಿ, ಹಪ್ಪಳವನ್ನು ಒಳಗೊಂಡ ಹೋಳಿಗೆ ಊಟವನ್ನು ನೂರಾರು ಮಂದಿ ಸವಿದು ಸಮಾಜದ ಸಹಬಾಳ್ವೆ, ಭಾತೃತ್ವ ಮೂಡಿಸುವ ಸಂದೇಶ ಸಾರಿದರು.
ಇದಕ್ಕೂ ಮುನ್ನ ವೇದಿಕೆ ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಪ್ರೊ.ಕಾಳೇಗೌಡ ನಾಗವಾರ ಮಾತನಾಡಿ, ಬಸವಲಿಂಗಪ್ಪ ಅವರು ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಕಾಯ್ದೆ ಜಾರಿಗೆ ತಂದರು. ಇಂದು ನಾವು ತಲೆಯಲ್ಲಿ ತುಂಬಿರುವ ಜಾತಿ ತಾರತಮ್ಯ, ಮೇಲು-ಕೀಳಿನ ಪದ್ಧತಿಯನ್ನು ಕೊನೆಗಾಣಿಸಲು ಪಣತೊಡಬೇಕು. ಸಾಮೂಹಿಕ ಹೊಣೆಗಾರಿಕೆಯಿಂದ ಈ ಕೆಲಸ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆದಿ ಕರ್ನಾಟಕ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಜ್ಞಾನ ಸ್ವರೂಪನಂದ ಸ್ವಾಮೀಜಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಸಂವಿಧಾನ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಎನ್.ಭಾಸ್ಕರ್, ಸಂಸ್ಕೃತಿ ಚಿಂತಕ ಕೆ.ರಘುರಾಮ ವಾಜಪೇಯಿ, ಮಾಜಿ ಮಹಾಪೌರ ಪುರುಷೋತ್ತಮ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…