Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ: ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಿಷ್ಟು.!

kj george

ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲವನ್ನೂ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನವೆಂಬರ್‌ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂಬ ವಿಚಾರ ಭಾರೀ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ 5 ವರ್ಷ ಆದರೂ ಇರಬಹುದು. 10 ವರ್ಷ ಆದರೂ ಇರಬಹುದು. ಇದೆಲ್ಲವನ್ನು ನಿರ್ಧರಿಸೋದು ಹೈಕಮಾಂಡ್.‌ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗುತ್ತೆ ಎಂದು ನೀವು ಕೇಳುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡುತ್ತಿದ್ದೇನೆ.

ಇದೆಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಶಾಸಕರು ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಸಿಎಂ ಸಿದ್ದರಾಮಯ್ಯ ಪರವಿದೆ. ನೀವು ನನ್ನ ಬಾಯಿಯಲ್ಲಿ ಬದಲಾವಣೆ ಮಾತು ಹೇಳಿಸಲು ಪ್ರಯತ್ನ ಮಾಡುತ್ತಿದ್ದೀರಾ. ಆದರೆ ಸಿಎಂ ಬದಲಾವಣೆ ಅಗುತ್ತೋ ಇಲ್ವೋ, ಅದೆಲ್ಲ ನನಗೆ ಗೊತ್ತಿಲ್ಲ. ಒಂದು ವೇಳೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆದ್ರೆ ಆವಾಗಲೇ ಉತ್ತರ ಕೊಡುತ್ತೇನೆ ಎಂದು ಸಿಎಂ ಬದಲಾವಣೆ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು.

Tags:
error: Content is protected !!