kj george
ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂಬ ವಿಚಾರ ಭಾರೀ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ 5 ವರ್ಷ ಆದರೂ ಇರಬಹುದು. 10 ವರ್ಷ ಆದರೂ ಇರಬಹುದು. ಇದೆಲ್ಲವನ್ನು ನಿರ್ಧರಿಸೋದು ಹೈಕಮಾಂಡ್. ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗುತ್ತೆ ಎಂದು ನೀವು ಕೇಳುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡುತ್ತಿದ್ದೇನೆ.
ಇದೆಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಶಾಸಕರು ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಸಿಎಂ ಸಿದ್ದರಾಮಯ್ಯ ಪರವಿದೆ. ನೀವು ನನ್ನ ಬಾಯಿಯಲ್ಲಿ ಬದಲಾವಣೆ ಮಾತು ಹೇಳಿಸಲು ಪ್ರಯತ್ನ ಮಾಡುತ್ತಿದ್ದೀರಾ. ಆದರೆ ಸಿಎಂ ಬದಲಾವಣೆ ಅಗುತ್ತೋ ಇಲ್ವೋ, ಅದೆಲ್ಲ ನನಗೆ ಗೊತ್ತಿಲ್ಲ. ಒಂದು ವೇಳೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆದ್ರೆ ಆವಾಗಲೇ ಉತ್ತರ ಕೊಡುತ್ತೇನೆ ಎಂದು ಸಿಎಂ ಬದಲಾವಣೆ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು.
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…