Mysore
21
broken clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಮೈಸೂರು: ಜಲದರ್ಶಿನಿಯಲ್ಲಿ ಮನಮೋಹನ್‌ ಸಿಂಗರಿಗೆ ಶ್ರದ್ಧಾಂಜಲಿ ಸಲ್ಲಿಸಿದ-ಕೆ.ಹರೀಶ್‌ ಗೌಡ

ಮೈಸೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಅವರಿಗೆ ಶಾಸಕ ಕೆ.ಹರೀಶ್‌ ಗೌಡ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಸೇರಿದಂತೆ ಅನೇಕ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮನಮೋಹನ್‌ ಸಿಂಗ್‌ ಅವರ ಸ್ಮರಣಾರ್ಥ ಇಂದು(ಡಿಸೆಂಬರ್‌.27) ಚಾಮರಾಜ ಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಪಕ್ಷ ವತಿಯಿಂದ ಸಿಂಗ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರು ಪ್ರಪಂಚದ ಉತ್ತಮ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿದ್ದರು. ಅವರು ದೇಶಕ್ಕೆ ಪ್ರಧಾನಿಗಳಾದ ನಂತರ ಅನೇಕ ಸುಧಾರಣೆಗಳು ಹಾಗೂ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಅವರಿಗೂ ಮೈಸೂರಿಗೂ ಅವಿನಾಭವ ಸಂಬಂಧವಿದ್ದು, ಅವರು ಪ್ರಧಾನಿಯಾಗಿದ್ದಾಗ ಮೈಸೂರಿಗೆ ಭೇಟಿ ನೀಡಿದ್ದರು ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಎರಡೂ ಬಾರಿ ಪ್ರಧಾನಿಯಾಗಿ ಭಾರತ ದೇಶವನ್ನು ಮತ್ತು ಭಾರತದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದವರು. ಅವರು ಅಂದು ಸದೃಢವಾಗಿ ನಿರ್ಧರಿಸಿ ಜಾರಿಗೆ ತಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳಿಂದಲೇ ಇಂದು ಅವರ ಮುಂದಿನ ಪೀಳಿಗೆಯವರು ಆದರ್ಶವಾಗಿ ಬದುಕಲು ಸಾಧ್ಯವಾಗುತ್ತಿರುವುದು ಎಂದು ತಿಳಿಸಿದ್ದಾರೆ.

ಇನ್ನೂ ಮನಮೋಹನ್‌ಸಿಂಗ್‌ ಅವರ ನಿಧನ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

 

Tags:
error: Content is protected !!