ಮೈಸೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಅವರಿಗೆ ಶಾಸಕ ಕೆ.ಹರೀಶ್ ಗೌಡ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸೇರಿದಂತೆ ಅನೇಕ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮನಮೋಹನ್ ಸಿಂಗ್ ಅವರ ಸ್ಮರಣಾರ್ಥ ಇಂದು(ಡಿಸೆಂಬರ್.27) ಚಾಮರಾಜ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪಕ್ಷ ವತಿಯಿಂದ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಪ್ರಪಂಚದ ಉತ್ತಮ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿದ್ದರು. ಅವರು ದೇಶಕ್ಕೆ ಪ್ರಧಾನಿಗಳಾದ ನಂತರ ಅನೇಕ ಸುಧಾರಣೆಗಳು ಹಾಗೂ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಅವರಿಗೂ ಮೈಸೂರಿಗೂ ಅವಿನಾಭವ ಸಂಬಂಧವಿದ್ದು, ಅವರು ಪ್ರಧಾನಿಯಾಗಿದ್ದಾಗ ಮೈಸೂರಿಗೆ ಭೇಟಿ ನೀಡಿದ್ದರು ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಎರಡೂ ಬಾರಿ ಪ್ರಧಾನಿಯಾಗಿ ಭಾರತ ದೇಶವನ್ನು ಮತ್ತು ಭಾರತದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದವರು. ಅವರು ಅಂದು ಸದೃಢವಾಗಿ ನಿರ್ಧರಿಸಿ ಜಾರಿಗೆ ತಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳಿಂದಲೇ ಇಂದು ಅವರ ಮುಂದಿನ ಪೀಳಿಗೆಯವರು ಆದರ್ಶವಾಗಿ ಬದುಕಲು ಸಾಧ್ಯವಾಗುತ್ತಿರುವುದು ಎಂದು ತಿಳಿಸಿದ್ದಾರೆ.
ಇನ್ನೂ ಮನಮೋಹನ್‌ಸಿಂಗ್ ಅವರ ನಿಧನ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ…
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…